ಮೂಡುಬಿದಿರೆ, ಸೆ.13: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಹುಮಾನ ವಿತರಣಾ ಸಮಾರಂಭದಲ್ಲಿ ಬಿ.ಪಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ ಮಧು ಎಂ ಜಿ, ತರಬೇತುದಾರರಾದ ಪ್ರದೀಪ್, ರವಿ, ಅಕ್ಷಿತ್ ಶೆಟ್ಟಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ನವೀನ್ ರೈ ಮತ್ತು ಹರ್ಷಿತಾ ಶೆಟ್ಟಿ ಇದ್ದರು.
ಖೋ ಖೋ ಪಂದ್ಯಾಟ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ
ಖೋ ಖೋ ಪಂದ್ಯಾಟ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ
Date: