Sunday, July 26, 2026
Sunday, July 26, 2026

ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಗೆ ಗೌರವಾರ್ಪಣೆ

ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಗೆ ಗೌರವಾರ್ಪಣೆ

Date:

ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ| ನಲ್ಲೂರು ಪ್ರಸಾದ್ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಅವರನ್ನು ಕಲ್ಕೂರ ಪ್ರತಿಷ್ಠಾನದಿಂದ ಗೌರವಿಸಲಾಯಿತು. ಈ ಸಂದರ್ಭ ಪಠ್ಯಪುಸ್ತಕಗಳ ಕುರಿತು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತಾಗಿ ಸಂವಾದ ನಡೆಸಲಾಯಿತು.

ರಾಷ್ಟ್ರೀಯ ಭಾವೈಕ್ಯತೆಯನ್ನು ಕಾಪಾಡಿಕೊಂಡು ಇತಿಹಾಸ, ವಿಜ್ಞಾನ, ತಂತ್ರಜ್ಞಾನ, ಕೃಷಿ, ಸಂಸ್ಕೃತಿ ಹೀಗೆ ಬಹುನೆಲೆಗಳನ್ನೊಳಗೊಂಡ ಭಾಷಾ ಪ್ರೌಢಿಮೆಯ ಜ್ಞಾನವನ್ನು ಬೆಳೆಸಬಲ್ಲ ಸಮಗ್ರ ಶಿಕ್ಷಣ ಮಕ್ಕಳಿಗೆ ಲಭಿಸಬೇಕಾದುದು ಇಂದಿನ ಅನಿವಾರ್ಯತೆಯಾಗಿದೆ ಎಂದು ನಲ್ಲೂರು ಪ್ರಸಾದ್ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಸರ್ವ ಧರ್ಮ ವಿಚಾರಧಾರೆಗಳನ್ನು ಒಳಗೊಂಡಂತೆ ಪರಿಸರ, ಸಂಸ್ಕೃತಿ, ಇತಿಹಾಸ ಸಹಿತ ಪ್ರಾಪಂಚಿಕ ಜ್ಞಾನ ನೀಡಬಲ್ಲ ಪಠ್ಯಗಳುಳ್ಳ ರಾಷ್ಟ್ರೀಯ ಶಿಕ್ಷಣ ನೀತಿ ರೂಪುಗೊಳ್ಳಲಿ ಎಂದರು.

ಚಿತ್ರದುರ್ಗ ಮಠದ ಶ್ರೀ ವಿಜಯಾನಂದ ಸ್ವಾಮೀಜಿ, ಜಯ ಬಸವ ತಪೋವನ, ಚಿಕ್ಕಮಗಳೂರಿನ ಜಯ ಬಸವಾನಂದ ಸ್ವಾಮೀಜಿ, ಸರ್ವ ಧರ್ಮ ಸಮನ್ವಯ ಸಮಿತಿಯ ಅಧ್ಯಕ್ಷ ಮೌಶಿರ್ ಅಹಮದ್ ಸಾಮಣಿಗೆ, ಕರ್ನಾಟಕ ರಕ್ಷಣಾ ವೇದಿಕೆಯ ರಾಝಿಕ್ ಆತೂರು, ಶಾಹುಲ್ ಖಾಸಿಮ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಹಿರಿಯ ಯಕ್ಷಗಾನ ಪ್ರಸಂಗ ಕರ್ತ ಅರ್ಥದಾರಿ ನಿತ್ಯಾನಂದ ಕಾರಂತ ಪೊಳಲಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!