Monday, September 30, 2024
Monday, September 30, 2024

ಡಿ. 10-15: 6 ದಿನಗಳ 30ನೇ ಆಳ್ವಾಸ್ ವಿರಾಸತ್ ೨೦೨೪

ಡಿ. 10-15: 6 ದಿನಗಳ 30ನೇ ಆಳ್ವಾಸ್ ವಿರಾಸತ್ ೨೦೨೪

Date:

ಮೂಡುಬಿದಿರೆ, ಸೆ.30: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ‘ಆಳ್ವಾಸ್ ವಿರಾಸತ್-2024’ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾಗಿರಿಯ ಆವರಣದಲ್ಲಿ ಆಳ್ವಾಸ್ ವಿರಾಸತ್-2024 ಡಿಸೆಂಬರ್ 10, 2024ನೇ ಮಂಗಳವಾರದಂದು ಪ್ರಾರಂಭವಾಗಿ ಡಿಸೆಂಬರ್ 15, 2024ನೇ ಭಾನುವಾರದಂದು ಮುಕ್ತಾಯಗೊಳ್ಳಲಿದೆ.

ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ ದಿನ 15.12.2024ನೇ ಭಾನುವಾರವನ್ನು ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ವು ನಡೆಸುವ ಆಳ್ವಾಸ್ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್-2024’ ಗೆ ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!