Sunday, January 19, 2025
Sunday, January 19, 2025

ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

Date:

ಮೂಡುಬಿದಿರೆ, ಅ.5: ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿಯ ಜೊತೆಗೆ ನೆಲ, ಜಲವನ್ನು ಉಳಿಸಿಕೊಂಡು ಬರಬೇಕಾದ ಹೊಣೆಗಾರಿಕೆ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ. ಸರಕಾರದ ಆಶಯದಂತೆ ನಾವೆಲ್ಲರೂ ನಾಡುನುಡಿ ಪ್ರೀತಿಯ ಜೊತೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸುವಲ್ಲಿ ಶ್ರಮಿಸಬೇಕಾಗಿದೆ ಎಂಬುದಾಗಿ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಹೇಳಿದರು. ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣಗೊಂಡು ೫೦ ವರ್ಷಗಳು ತುಂಬಿದ ಸುವರ್ಣ ಸಂಭ್ರಮದ ಸಂದರ್ಭದ ಸಲುವಾಗಿ ‘ಕನ್ನಡ ಜ್ಯೋತಿ ರಥಯಾತ್ರೆ’ಯನ್ನು ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಬಳಿ ಸ್ವಾಗತಿಸಿ ಮಾತಾನಾಡಿದರು. ರಥಕ್ಕೆ ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರು, ಕ.ಸಾ.ಪ ಹೋಬಳಿ ಘಟಕದ ಅಧ್ಯಕ್ಷರು ಮತ್ತಿತರ ಆಡಳಿತ ವರ್ಗದವರು ಮಾಲಾರ್ಪಣೆ ನೆರವೇರಿಸಿದರು.

ಕಂದಾಯ ನಿರೀಕ್ಷಕರಾದ ಮಂಜುನಾಥ ಹಾಗೂ ಆಡಳಿತ ಸೌಧದ ಅಧಿಕಾರಿಗಳು, ನೌಕರ ವೃಂದ, ಕ್ಷೇತ್ರ ಶಿಕ್ಷಣಾಧಿಕಾರಿ, ಕ.ಸಾ.ಪದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ, ಕಾರ್ಯದರ್ಶಿ ಸದಾನಂದ ನಾರಾವಿ, ಸಂಘಟನಾ ಕಾರ್ಯದರ್ಶಿ ಯತಿರಾಜ ಶೆಟ್ಟಿ, ಹೋಬಳಿ ಅಧ್ಯಕ್ಷ ರಾಮಕೃಷ್ಣ ಶಿರೂರು, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್, ಖಾಸಗಿ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶಶಿಕಾಂತ್ ಮುಂತಾದವರು ಈ ಸಂದರ್ಭದಲ್ಲಿ ಇದ್ದರು. ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು ಮಂಗಳೂರಿನಿಂದ ಮೂಡುಬಿದಿರೆಗೆ ಆಗಮಿಸಿದ ರಥಯಾತ್ರೆಯನ್ನು ಮೂಡುಬಿದಿರೆ ಗಡಿಭಾಗದ ಮಿಜಾರಿನ ಬಳಿ ಹಾರ್ದಿಕವಾಗಿ ಬರಮಾಡಿಕೊಳ್ಳಲಾಯಿತು.

ಮಂಗಳೂರು ತಾಲೂಕು ಕ.ಸಾ.ಪ ಅಧ್ಯಕ್ಷ ಮಂಜುನಾಥ ರೇವಣ್ಕರ್, ಸಂಘಟನಾ ಸಹಕಾರ್ಯದರ್ಶಿಗಳಾದ ಸನತ್ಕುಮಾರ್ ಜೈನ್ ಹಾಗೂ ಅಧಿಕಾರಿ ವರ್ಗದವರು ರಥಯಾತ್ರೆಯ ಮುಂದಿನ ಹೊಣೆಗಾರಿಕೆಯನ್ನು ಮೂಡುಬಿದಿರೆ ಕಂದಾಯ ನಿರೀಕ್ಷಕರಾದ ಮಂಜುನಾಥ ಮತ್ತು ಮೂಡುಬಿದಿರೆ ತಾಲೂಕು ಕ.ಸಾ.ಪ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ ಅವರಿಗೆ ಒಪ್ಪಿಸಿದರು. ಇತರ ಅಧಿಕಾರಿ ವರ್ಗ ಹಾಗೂ ಮೂಡುಬಿದಿರೆ ತಾಲೂಕು ಘಟಕದ ಕಾರ್ಯದರ್ಶಿ, ಸಂಚಾಲಕರು ಹಾಜರಿದ್ದು ರಥಯಾತ್ರೆಯನ್ನು ಬರಮಾಡಿಕೊಂಡರು. ಅಲ್ಲಿಂದ ಮೂಡುಬಿದಿರೆ ತಾಲೂಕು ಆಡಳಿತ ಸೌಧದ ತನಕ ಮೂಡುಬಿದಿರೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ನೆಲೆನಿಂತಿದ್ದು ಮಾರನೆಯ ದಿನ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಬೀಳ್ಕೊಡಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!