Monday, January 20, 2025
Monday, January 20, 2025

ಸಿಒಡಿಪಿ: ಮಕ್ಕಳ ಶಿಬಿರ

ಸಿಒಡಿಪಿ: ಮಕ್ಕಳ ಶಿಬಿರ

Date:

ಮಂಗಳೂರು, ಅ.8: ಮಂಗಳೂರು ಧರ್ಮಪ್ರಾಂತ್ಯದ ಸಿಒಡಿಪಿ ಸೇವಾ ಸಂಸ್ಥೆಯಲ್ಲಿ ಮಕ್ಕಳ ಶಿಬಿರ ಏರ್ಪಡಿಸಲಾಗಿತ್ತು. ಮಕ್ಕಳ ಶೈಕ್ಷಣಿಕ ದತ್ತು ನಿಧಿ ಯೋಜನೆಯಡಿ 203 ಮಕ್ಕಳು ಶಿಬಿರದ ಪ್ರಯೋಜನವನ್ನು ಪಡೆದರು. ಸಿಒಡಿಪಿ ಸಂಸ್ಥೆಯ ನಿರ್ದೇಶಕ ಫಾ| ವಿನ್ಸೆಂಟ್ ಡಿ ಸೋಜರವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಂಪನ್ಮೂಲ ವ್ಯಕ್ತಿಗಳಾದ ಶರಲ್ ಮತ್ತು ಶರ್ಮಿಳಾ ಪ್ರಸುತ್ತ ವಿಷಯಗಳ ಬಗ್ಗೆ, ಕಲಿಯುವ ಮತ್ತು ಗ್ರಹಿಸುವ ಕೌಶಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಕದ್ರಿ ಪೋಲಿಸ್ ಠಾಣೆಯ ನಿರೀಕ್ಷಕರು ಮತ್ತು ಉಪ ನಿರೀಕ್ಷಕರು ಮಕ್ಕಳ ಸುರಕ್ಷತೆಯ ಕಾನೂನಿನ ಬಗ್ಗೆ ತಿಳುವಳಿಕೆ ನೀಡಿದರು. ಡ್ರಗ್ಸ್ ದಂಧೆ, ಮಕ್ಕಳ ವಿರುದ್ಧ ನಡೆಯುವ ಲೈಗಿಂಕ ಆರೋಪಗಳ ಬಗ್ಗೆ ಕದ್ರಿ ಠಾಣೆಯ ನಿರೀಕ್ಷಕ ಸೋಮಶೇಖರ್‌ ಮಾಹಿತಿ ನೀಡಿದರು ಮತ್ತು ಉಪ ನಿರೀಕ್ಷಕಿ ಪ್ರತಿಭಾ ಮೊಬೈಲ್ ಸದ್ಬಳಕೆಯ ಬಗ್ಗೆ ಜಾಗೃತಿ ನೀಡಿದರು. ಯೋಜನೆಯ ಸಂಯೋಜಕಿ ಡೋರಿಸ್ ಲೆನೆಟ್‌ ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ಪ್ರಿಯಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!