Saturday, January 18, 2025
Saturday, January 18, 2025

ಮಂಗಳೂರು ವಕೀಲರ ಸಂಘ: ಪೋಸ್ಟರ್ ಬಿಡುಗಡೆ

ಮಂಗಳೂರು ವಕೀಲರ ಸಂಘ: ಪೋಸ್ಟರ್ ಬಿಡುಗಡೆ

Date:

ಮಂಗಳೂರು, ನ.17: ಮಂಗಳೂರು ವಕೀಲರ ಸಂಘದ ವತಿಯಿಂದ ಡಿಸೆಂಬರ್ 13,14, ಮತ್ತು 15 ರಂದು ನಡೆಯುವ ರಾಜ್ಯಮಟ್ಟದ ವಕೀಲರ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರು ವಕೀಲರ ಸಂಘದ ಸಭಾಭವನದಲ್ಲಿ ನಡೆಯಿತು. ಮಂಗಳೂರು ವಕೀಲರ ಸಂಘದ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ರಾಜ್ಯಸಭಾ ಸದಸ್ಯರಾದ ಬಿ. ಇಬ್ರಾಹಿಂ ಪೋಸ್ಟರ್ ಬಿಡುಗಡೆಗೊಳಿಸಿದರು.

ವಕೀಲ ಸಂಘದ ಮಾಜಿ ಅಧ್ಯಕ್ಷ ಮೋನಪ್ಪ ಭಂಡಾರಿ, ಸಂಚಾಲಕರು ಹಾಗೂ ವಕೀಲರ ಸಂಘ ಸದಸ್ಯರಾದ, ಮಾಜಿ ಅಧ್ಯಕ್ಷರುಗಳಾದ ಅಶೋಕ್ ಅರಿಗ, ಎನ್ ನರಸಿಂಹ ಹೆಗಡೆ, ಆರ್ಥಿಕ ಸಮಿತಿಯ ಸಂಚಾಲಕರಾದ ಬಿ ಜಿನೇಂದ್ರ ಕುಮಾರ್, ಪ್ರಮುಖರಾದ ಜಗದೀಶ ಶೇಣವ, ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಹೆಚ್ ವಿ., ಉಪಾಧ್ಯಕ್ಷ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ ಎಚ್, ಖಜಾಂಚಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ಸಮಿತಿಯ ಹಿರಿಯ ಸದಸ್ಯರಾದಂತಹ ಆಶಾ ನಾಯಕ್, ದೇವದಾಸ್ ರಾವ್, ಸುಮನಾ ಶರಣ್, ಆರತಿ ಸುರತ್ಕಲ್, ಮಹಮ್ಮದ್ ಅಸ್ಗರ್ ಮುಡಿಪು , ಹರೀಶ್, ಚಂದ್ರಹಾಸ ಕೊಟ್ಟರಿ, ರವಿಕುಮಾರ್ ವಿ., ಗಿರೀಶ್ ಶೆಟ್ಟಿ ಆರ್ಥಿಕ ಸಮಿತಿಯ ಸಹ ಸಂಚಾಲಕರಾದ, ಅಬ್ದುಲ್ ಶುಕುರ್, ಅರುಣ್ ಶೆಟ್ಟಿ, ರಾಘವೇಂದ್ರ ರಾವ್, ಅರುಣ ಬಿ ಪಿ., ಪ್ರಫುಲ್ಲಾ ಪ್ರೇಮ್, ಆಶಲತಾ ಕಾಮತ್, ಮಯೂರ್ ಕೀರ್ತಿ ಹಾಗೂ ಮಂಗಳೂರು ವಕೀಲರ ಸಂಘದ ಸದಸ್ಯರು, ಕ್ರಿಕೆಟ್ ಹಾಗೂ ಥ್ರೋ ಬಾಲ್ ಪಂದ್ಯಾಟದ ಮುಖ್ಯಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!