Tuesday, February 25, 2025
Tuesday, February 25, 2025

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Date:

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಇಲ್ಲಿ ಐ.ಕ್ಯೂ.ಎ.ಸಿ ಮತ್ತು ರಾಜ್ಯಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ಹಾಗೂ ಸಂವಿಧಾನ ದಿನದ ಮಹತ್ವದ ಬಗ್ಗೆ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ವಿವರಿಸಿದರು. ಸಂವಿಧಾನ ಕರ್ತೃ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪುಷ್ಪಾರ್ಚನೆಯ ಮೂಲಕ
ಗೌರವಾರ್ಪಣೆ ಸಲ್ಲಿಸಿದರು. ನಸೀಮಾ ಬೇಗಂ, ಸಹಾಯಕ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ರಾಜ್ಯಶಾಸ್ತ್ರ ವಿಭಾಗ, ಇವರು ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ನಿರ್ವಹಿಸಿದರು. ಸುಮಾರು 500 ಕ್ಕೂ ಹೆಚ್ಚು ಸ್ನಾತಕ – ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ 100 ಕ್ಕೂ ಹೆಚ್ಚು ಬೋಧಕ- ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಐಕ್ಯೂಎಸಿಯ ಸಂಯೋಜಕರಾದ ದೇವಿಪ್ರಸಾದ್ ಹಾಗೂ ಸಹ- ಸಂಯೋಜಕರಾದ ಡಾ. ಜ್ಯೋತಿಪ್ರಿಯಾ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!