Thursday, December 5, 2024
Thursday, December 5, 2024

ಜವಾಬ್ದಾರಿ ಮತ್ತು ಕರ್ತವ್ಯಗಳ ಅರಿವಿದ್ದರೆ ಉತ್ತಮ ಶಿಕ್ಷಕರಾಗಬಹುದು: ಪ್ರೊ. ರಾಮೇಗೌಡ

ಜವಾಬ್ದಾರಿ ಮತ್ತು ಕರ್ತವ್ಯಗಳ ಅರಿವಿದ್ದರೆ ಉತ್ತಮ ಶಿಕ್ಷಕರಾಗಬಹುದು: ಪ್ರೊ. ರಾಮೇಗೌಡ

Date:

ಮಂಗಳೂರು, ಡಿ.2: ನಮ್ಮ ವೃತ್ತಿ ಕ್ಷೇತ್ರದ ಜವಾಬ್ದಾರಿ ಮತ್ತು ಕರ್ತವ್ಯಗಳಿಗೆ ಸಂಬಂಧಿಸಿದ ನಿಯಮಗಳನ್ನು ವೃತ್ತಿಯ ಆರಂಭದಲ್ಲಿಯೇ ಅರಿತುಕೊಳ್ಳುವುದರ ಜೊತೆಗೆ ಅವುಗಳನ್ನು ನಿರಂತರವಾಗಿ ಪಾಲಿಸಿದರೆ ಉತ್ತಮ ಶಿಕ್ಷಕರಾಗಬಹುದು ಎಂದು ಕಾಲೇಜ ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೊ. ರಾಮೇಗೌಡ ಅವರು ಹೇಳಿದರು. ಅವರು ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸರಕಾರಿ ಪದವಿ ಕಾಲೇಜುಗಳಿಗೆ ನೂತನವಾಗಿ ನೇಮಕಾತಿಯಾದ ಸಹಾಯಕ ಪ್ರಾಧ್ಯಾಪಕರ ಸ್ವಾಗತ ಮತ್ತು ಒರಿಎಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಹಾಯಕ ಪ್ರಾಧ್ಯಾಪಕರ ಶೈಕ್ಷಣಿಕ ಜವಾಬ್ದಾರಿಗಳು, ವೃತ್ತಿ ಪದೋನ್ನತಿ ಮತ್ತು ಸೇವಾ ವಿಚಾರಗಳನ್ನು ನಿಯಂತ್ರಿಸುವ ಕರ್ನಾಟಕ ಸಿವಿಲ್ ಸೇವೆ ಮತ್ತೆ ನಡತೆ ನಿಯಮಗಳು, ಯುಜಿಸಿ ನಿಯಮಾವಳಿಗಳು ಮತ್ತು ವಿಶ್ವವಿದ್ಯಾನಿಲಯ ಕಾಯ್ದೆಗಳ ಬಗ್ಗೆ ನಂತರದ ತಾಂತ್ರಿಕ ಅಧಿವೇಶನಗಳಲ್ಲಿ ಪ್ರೊ. ರಾಮೇಗೌಡ, ಪ್ರೊ. ಜಯಕರ ಭಂಡಾರಿ ಮತ್ತು ಶೈಕ್ಷಣಿಕ ಸಂಯೋಜಕರಾದ ದೇವಿಪ್ರಸಾದ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.

ಕರ್ನಾಟಕ ಸರಕಾರದ ಕಾಲೇಜು ಶಿಕ್ಷಣ ಇಲಾಖೆಯಿಂದ ನೇಮಕಾತಿಗೊಂಡು ಮಂಗಳೂರು ಪ್ರಾದೇಶಿಕ ವಲಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಸುಮಾರು 110 ಸಹಾಯಕ ಪ್ರಾಧ್ಯಾಪಕರು ಮತ್ತು ಮತ್ತು 30ಕ್ಕೂ ಅಧಿಕ ಪ್ರಾಂಶುಪಾಲರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಜ್ಯೋತಿಪ್ರಿಯ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಧ್ಯಾಪಕರಾದ ಡಾ. ಲೋಕೇಶನಾಥ್, ಡಾ. ಪುರುಷೋತ್ತಮ ಭಟ್, ಉಮಾ, ಜ್ಯೋತಿ ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೋಟಗಾರಿಕೆ ಇಲಾಖೆಯಿಂದ ಜೇನುತುಪ್ಪಕ್ಕೆ ಬ್ರ್ಯಾಂಡ್ ಹೆಸರು ಅಭಿವೃದ್ಧಿ

ಉಡುಪಿ, ಡಿ.4: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗ್ರಾಹಕರಿಗೆ ಗುಣಮಟ್ಟದ...

ವಿಶ್ವ ಏಡ್ಸ್ ದಿನಾಚರಣೆ ಮಾಹಿತಿ ಕಾರ್ಯಕ್ರಮ

ಉಡುಪಿ, ಡಿ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...
error: Content is protected !!