Sunday, January 19, 2025
Sunday, January 19, 2025

ಕನ್ನಡ ಭವನ ಕಾಸರಗೋಡಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ರೇಖಾ ಸುದೇಶ್ ರಾವ್ ಆಯ್ಕೆ

ಕನ್ನಡ ಭವನ ಕಾಸರಗೋಡಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ರೇಖಾ ಸುದೇಶ್ ರಾವ್ ಆಯ್ಕೆ

Date:

ಉಡುಪಿ, ಡಿ.12: ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾನ್ನಾಗಿ ಸಂಘಟಕಿ, ಲೇಖಕಿ, ಕವಯತ್ರಿ ರೇಖಾ ಸುದೇಶ್ ರಾವ್ ಇವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ -ಪುಸ್ತಕ ನಿತ್ಯ, ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು ಕಾಸರಗೋಡು ಕನ್ನಡ ಭವನದ ನಿರ್ದೇಶಕ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದ್ದು ಕನ್ನಡ ಭವನದ ಗೌರವ ಅಧ್ಯಕ್ಷ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು.

ಸರ್ವಾನುಮತದಿಂದ ಆಯ್ಕೆಯಾದ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ ರಜತ ಸಂಭ್ರಮ 2025 ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯನಿರ್ವಹಿಸಬೇಕೆಂದು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!