Sunday, February 8, 2026
Sunday, February 8, 2026

ವಿಟ್ಲ: ತುಳು ಲಿಪಿ ಶಾಸನ ಪತ್ತೆ

ವಿಟ್ಲ: ತುಳು ಲಿಪಿ ಶಾಸನ ಪತ್ತೆ

Date:

ವಿಟ್ಲ, ಮಾ.2: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀ ಗಣಪತಿ ಲಕ್ಷ್ಮೀ ನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರ ಸಂದರ್ಭದಲ್ಲಿ ಎರಡು ಶಿಲಾ ಫಲಕದಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡು ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರ- ಕುಕ್ಕೆ ಸುಬ್ರಹ್ಮಣ್ಯ ಇದರ ನಿರ್ದೇಶಕರಾದ ಡಾ. ಜಿ.ವಿ ಕಲ್ಲಾಪುರ ಅವರು ಶಾಸನದ ಅಧ್ಯಯನವನ್ನು ಮಾಡಿರುತ್ತಾರೆ.

ಶಾಸನವನ್ನು ಎರಡು ಕಣ ಶಿಲೆಯಲ್ಲಿ (ಗ್ರಾನೈಟ್) ಕೊರೆಯಲಾಗಿದ್ದು, ತುಳು ಲಿಪಿ ಮತ್ತು ಕನ್ನಡ ಭಾಷೆಯಲ್ಲಿದೆ. ಶಾಸನದ ಒಂದು ಫಲಕದಲ್ಲಿ 11 ಸಾಲುಗಳು ಮತ್ತು ಇನ್ನೊಂದು ಫಲಕದಲ್ಲಿ 4 ಸಾಲುಗಳಿವೆ. ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ (ಸಾಮಾನ್ಯ ವರ್ಷ 1879) ಪ್ರಮಾಧಿ ಸಂವತ್ಸರದ ಉತ್ತರಾಯಣದ ಬಹುಳ ಬುಧವಾರದ ಕುಂಭ ಲಗ್ನದಲ್ಲಿ ಹಾಕಲ್ಪಟ್ಟಿದೆ. ಈ ಸಂದರ್ಭದಲ್ಲಿ ವಿಟ್ಲದ ಬಕ್ರಬೈಲಿನ ನೆತ್ರಕೆರೆಯ ಮಠದಲ್ಲಿ ಶ್ರೀ ಗಣಪತಿ ಲಕ್ಷ್ಮೀ ನಾರಾಯಣ ದೇವರನ್ನು ಪ್ರತಿಷ್ಠಾಪಿಸಿರುವುದು ಹಾಗೆಯೇ ಪ್ರತಿಷ್ಠಿತ ದೇವರ ನಿತ್ಯ ಸೇವೆಯ ವಿನಿಯೋಗಕ್ಕಾಗಿ ನಗದು ಸಹಿತ ದಾನವನ್ನು ಕುಕ್ಕಿಲದ ಪುಟ್ಟಣ ಭಟ್ಟರ ಮಗ ಈಶ್ವರ ಭಟ್ಟರು ನೀಡಿರುವುದು ತಿಳಿದುಬರುತ್ತದೆ.

ಕ್ಷೇತ್ರಕಾರ್ಯ ಶೋಧನೆಯಲ್ಲಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ, ಉಪನಿರ್ದೇಶಕರು – ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರ-ಸುಬ್ರಹ್ಮಣ್ಯ, ಮಂಜುನಾಥ ನಂದಳಿಕೆ (ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ) ಹಾಗೂ ದೇವಾಲಯದ ಆಡಳಿತ ಮಂಡಳಿಯವರಾದ ಎನ್. ಶಂಕರನಾರಾಯಣ ಭಟ್ಟ, ಡಾ. ಎನ್. ತಿರುಮಲೇಶ್ವರ ಭಟ್ಟ, ಎನ್. ರವೀಶ, ಎನ್. ಮಹೇಶ, ಗಣೇಶ ಭಟ್, ಸುರೇಶ್ ಎನ್., ಶರ್ಮಿಳಾ, ಯು. ನಾರಾಯಣ ಭಟ್, ಮಂಜುಳಗಿರಿ ಈಶ್ವರ ಭಟ್ ಸಹಕಾರ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!