Thursday, October 1, 2026
Thursday, October 1, 2026

ಭಿಕ್ಷಾಟನೆ ನಡೆಸುತ್ತಿದ್ದ ಮಹಿಳೆಯ ಜೊತೆಗೆ 1 ವರ್ಷ ಪ್ರಾಯದ ಹೆಣ್ಣು ಮಗುವನ್ನು ರಕ್ಷಿಸಿದ ಮಂಗಳೂರು ಚೈಲ್ಡ್ ಲೈನ್

ಭಿಕ್ಷಾಟನೆ ನಡೆಸುತ್ತಿದ್ದ ಮಹಿಳೆಯ ಜೊತೆಗೆ 1 ವರ್ಷ ಪ್ರಾಯದ ಹೆಣ್ಣು ಮಗುವನ್ನು ರಕ್ಷಿಸಿದ ಮಂಗಳೂರು ಚೈಲ್ಡ್ ಲೈನ್

Date:

ಮಂಗಳೂರು: ಮಂಗಳೂರಿನ ನಂತೂರು ಸರ್ಕಲ್ ಬಳಿ ಅಪ್ರಾಪ್ತ ವಯಸ್ಸಿನ ಮಕ್ಕಳು ಭಿಕ್ಷಾಟನೆ ನಡೆಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬುದಾಗಿ ಸಾರ್ವಜನಿಕರಿಂದ ಚೈಲ್ಡ್ ಲೈನ್ -1098 ಕ್ಕೆ ಮಾಹಿತಿ ಬಂದಿರುವ ಹಿನ್ನಲೆಯಲ್ಲಿ, ಚೈಲ್ಡ್ ಲೈನ್ ತಂಡವು ನಂತೂರಿನ ಸ್ಥಳಕ್ಕೆ ತೆರಳಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದ ಬೆಂಗಳೂರಿನ ತಾವರೆಕೆರೆಯ ಮಹಿಳೆ ಹಾಗೂ ಆಕೆಯ ಬಳಿಯಿದ್ದ 1 ವರ್ಷದ ಪ್ರಾಯದ ಹೆಣ್ಣುಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಮಹಿಳಾ ಘಟಕದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಚೈಲ್ಡ್ ಲೈನ್ ನ ಕೇಂದ್ರ ಸಂಯೋಜಕರಾದ ದೀಕ್ಷಿತ್ ಅಚ್ರಪ್ಪಾಡಿ, ಸಿಬ್ಬಂದಿಗಳಾದ ಆಶಾಲತ ಕುಂಪಲ, ಹಾಗೂ ಜಯಂತಿ ಸ್ವಯಂ ಸೇವಕರಾದ ಕವನ್ ಕಬಕ ಜೊತೆಗಿದ್ದರು.

ನಗರದ ನಂತೂರನ್ನೇ ಕೇಂದ್ರವನ್ನಾಗಿಸಿ ವಲಸೆ ಕುಟುಂಬಗಳು ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರದೇ ಮಗುವೆನ್ನುವುದಕ್ಕೆ ಸ್ಪಷ್ಟ ದಾಖಲೆಗಳು ಇವರುಗಳ ಬಳಿ ಇಲ್ಲದಿರುವುದು ಕಂಡುಬಂದಿದೆ. ಆದ್ದರಿಂದ ಭಿಕ್ಷಾಟನೆ ನಿರತ ಮಕ್ಕಳು ನಗರದಲ್ಲಿ ಕಂಡುಬಂದಲ್ಲಿ ದಯವಿಟ್ಟು ಹಣದ ರೂಪದಲ್ಲಿ ಭಿಕ್ಷೆ ನೀಡಬೇಡಿ, ಕೂಡಲೇ ಚೈಲ್ಡ್ ಲೈನ್ -1098 ಕ್ಕೆ ಕರೆಮಾಡಿ ಮಾಹಿತಿ ನೀಡಲು ಕೋರಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!