Tuesday, October 20, 2026
Tuesday, October 20, 2026

ವಾರ್ಷಿಕ ಶಿಬಿರದ ಆಯೋಜನೆಯಿಂದ ನಾಯಕತ್ವ ಬೆಳವಣಿಗೆ: ಭರತ್‌ರಾಜ್

ವಾರ್ಷಿಕ ಶಿಬಿರದ ಆಯೋಜನೆಯಿಂದ ನಾಯಕತ್ವ ಬೆಳವಣಿಗೆ: ಭರತ್‌ರಾಜ್

Date:

ಮಂಗಳೂರು, ಮಾ.10: ಡಾ. ಪಿ. ದಯಾನಂದ ಪೈ-ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಮಂಗಳೂರು ಇದರ ಆಂತರಿಕ ಭರವಸಾ ಕೋಶ ಮತ್ತು ರೋವರ್ಸ್ ರೇಂಜರ್ಸ್ ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರ ಭಾರತ್ ಸ್ಕೌಟ್ ಗೈಡ್ ಜಿಲ್ಲಾ ತರಬೇತಿ ಕೇಂದ್ರ ಪಿಲಿಕುಳ ಇಲ್ಲಿ ನಡೆಯಿತು. ರಾಜ್ಯ ಸಂಘಟನಾ ಆಯುಕ್ತ ಭರತ್‌ರಾಜ್ ಇವರು ಶಿಬಿರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ವಾರ್ಷಿಕ ಶಿಬಿರಗಳಲ್ಲಿ ಭಾಗವಹಿಸುವುದರಿಂದ ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬಹುದು ಎಂದರು. ಇನ್ನೋರ್ವ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ಕಾರ್ಯಾಧ್ಯಕ್ಷ ಪ್ರತಿಮಾ ಕುಮಾರ್, ವಿದ್ಯಾರ್ಥಿಗಳು ಶಿಬಿರಗಳಲ್ಲಿ ಭಾಗವಹಿಸುವುದರಿಂದ ಸಾಮಾಜಿಕವಾಗಿ ವ್ಯಕ್ತಿತ್ವದ ಬೆಳವಣಿಗೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ ಇವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಹೆಚ್ಚು ಸಾಮಾಜಿಕವಾಗಿ ಬೆರೆಯಬಹುದು ಎಂದರು. ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ವಿನೋದ್ ಚೇವಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಐ.ಕ್ಯೂ.ಎ.ಸಿಯ ಸಂಚಾಲಕರಾದ ದೇವಿಪ್ರಸಾದ್, ಐ.ಕ್ಯೂ.ಎ.ಸಿಯ ಸಹ ಸಂಚಾಲಕರಾದ ಡಾ. ಜ್ಯೋತಿಪ್ರಿಯ, ಹಿರಿಯ ರೇಂಜರ್ಸ್ ವಿದ್ಯಾರ್ಥಿಗಳಾದ ಪ್ರೀತಿಕಾ, ನಿವೇದಿತಾ ಉಪಸ್ಥಿತರಿದ್ದರು. ರೇಂಜರ್ಸ್ ಘಟಕ ಸಂಚಾಲಕಿ ಡಾ. ಅಪರ್ಣ ಆಳ್ವ ಎನ್ ಸ್ವಾಗತಿಸಿ, ರೋವರ್ಸ್ ಘಟಕ ಸಂಚಾಲಕ ಡಾ. ಪುರುಷೋತ್ತಮ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೇಕ್ಷಿತಾ ಪ್ರಾರ್ಥನೆ ಹಾಡಿದರು. ಜಯಶ್ರೀ ವಂದಿಸಿದರು. ಎರಡು ದಿನಗಳ ಈ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ, ಸರ್ವಧರ್ಮ ಪ್ರಾರ್ಥನೆ, ಬಿ.ಪಿ.ಸಿಕ್ಸ್ ವ್ಯಾಯಾಮಗಳ, ಹಗ್ಗಗಳಿಂದ ಮಾಡುವ ವಿವಿಧ ರೀತಿಯ ಗಂಟುಗಳ ತಯಾರಿ ಬಗ್ಗೆ ತರಬೇತಿ ನೀಡಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

ಕಾಪು, ಅ.19: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.19: ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್...
error: Content is protected !!