Friday, October 2, 2026
Friday, October 2, 2026

ಕ್ರೀಡೆ ಸಾಧನೆಗೆ ಪೂರಕ: ಡಾ. ಸುಧಾಕರನ್

ಕ್ರೀಡೆ ಸಾಧನೆಗೆ ಪೂರಕ: ಡಾ. ಸುಧಾಕರನ್

Date:

ಮಂಗಳೂರು, ಮಾ.22: ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಉತ್ತಮ ಶಿಸ್ತನ್ನು ಕಲಿಯಬಹುದು ಹಾಗೂ ಅದು ಜೀವನದಲ್ಲಿ ಉತ್ತಮ ಸಾಧನೆಗೆ ಸಹಕಾರಿಯಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಸುಧಾಕರನ್ ಟಿ. ಹೇಳಿದರು. ಅವರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಮ್. ಅವರು ಮಾತನಾಡಿ, ಒಗ್ಗಟ್ಟು ಶಕ್ತಿಯ ಸಂಕೇತ, ಎಲ್ಲರೂ ಒಗ್ಗಟ್ಟಿನಿಂದ ಕ್ರೀಡೆಯಲ್ಲಿ ಭಾಗವಹಿಸಲು ಅವರು ಸಲಹೆ ನೀಡಿದರು. ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ದುಗ್ಗಪ್ಪ ಕಜೆಕಾರ್, ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್, ಐಕ್ಯೂಎಸಿ ಸಹಸಂಯೋಜಕಿ ಡಾ. ಜ್ಯೋತಿಪ್ರಿಯ, ದೈಹಿಕ ಶಿಕ್ಷಣ ನಿರ್ದೇಶಕರಾದ ಶುಭಾ ಕೆ.ಹೆಚ್., ಮತ್ತು ಡಾ. ಅಪರ್ಣ ಆಳ್ವ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು, ಹಿರಿಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉಪಸ್ಥಿತರಿದ್ದರು. ಕ್ರೀಡಾ ಪ್ರತಿಜ್ಞೆಯನ್ನು ಗಗನ್ ಸುವರ್ಣ ಓದಿದರು. ಸಾಕ್ಷಿ ವಂದಿಸಿದರು, ಶಶಾಂಕ್ ನಿರೂಪಿಸಿದರು.
ಕ್ರೀಡಾಕೂಟದಲ್ಲಿ ಕಾರ್ತಿಕ್ ಕೆ., ಸುದೀಪ್ ರಾಜ್ ಮಾಡೂರ್, ಪ್ರವೀಣ್ ಬಿ.ಎಂ. ನಿರ್ಣಾಯಕರಾಗಿ ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...

ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ನಮನ

ನವದೆಹಲಿ, ಅ.2: ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಅಂಗವಾಗಿ ದೇಶ ಅವರಿಗೆ...

ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಎಂ.ಎ.ಗಫೂರ್

ಉಡುಪಿ, ಅ.2: ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನ ಹೊಂದಿದ್ದು,...
error: Content is protected !!