Friday, October 2, 2026
Friday, October 2, 2026

‘ಕಸ ನಿರ್ವಹಣೆ’ ಮಾಹಿತಿ ಕಾರ್ಯಾಗಾರ

‘ಕಸ ನಿರ್ವಹಣೆ’ ಮಾಹಿತಿ ಕಾರ್ಯಾಗಾರ

Date:

ಮಂಗಳೂರು, ಏ.9: ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸ.ಪ್ರ.ದ.ಕಾಲೇಜು ರಥಬೀದಿ ಮಂಗಳೂರು ಇಲ್ಲಿಯ ಹಿರಿಯ ವಿದ್ಯಾರ್ಥಿಗಳ ಸಂಘದ ದಶಮಾನೋತ್ಸವದ ಅಂಗವಾಗಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಐಕ್ಯೂಏಸಿ ಸಹಯೋಗದಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳಿಗಾಗಿ ಕಸ ಪ್ರಸಂಗ :ಕಸ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಮಂಗಳವಾರ ನಡೆಯಿತು.

ಹಸಿರು ದಳ ಮಂಗಳೂರು ಇದರ ವ್ಯವಸ್ಥಾಪಕರಾದ ನಾಗರಾಜ್ ಆರ್ ಅಂಚನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.”ಕಸ ನಿರ್ವಹಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾದುದು. ನಿರ್ವಹಣೆಗಿಂತ ಬಳಕೆಯಲ್ಲಿ ಬದಲಾವಣೆ ಅಗತ್ಯ.ಪ್ಲಾಸ್ಟಿಕ್ ಮತ್ತಿತರ ಹಾನಿಕಾರಕ ವಸ್ತುಗಳ ಬದಲು ಸಾಂಪ್ರದಾಯಿಕ ವಸ್ತುಗಳನ್ನು ಬಳಸಬಹುದು” ಎಂಬ ಸಲಹೆಗಳನ್ನು ನೀಡಿದರು.

ಐಕ್ಯೂಏಸಿ ಸಂಯೋಜಕ ದೇವಿಪ್ರಸಾದ್, ಎನ್ ಎಸ್ ಎಸ್ ಸಂಯೋಜಕ ಡಾ. ಲೋಕೇಶ್ ನಾಥ್, ಡಾ.ಮೋಹನದಾಸ್, ಶಾಂತಿ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಧೀರಜ್ ಕುಮಾರ್, ಕಾರ್ಯದರ್ಶಿ ತುಷಾರ್ ಕೆ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿ ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...

ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ನಮನ

ನವದೆಹಲಿ, ಅ.2: ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಅಂಗವಾಗಿ ದೇಶ ಅವರಿಗೆ...

ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಎಂ.ಎ.ಗಫೂರ್

ಉಡುಪಿ, ಅ.2: ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನ ಹೊಂದಿದ್ದು,...
error: Content is protected !!