Sunday, September 6, 2026
Sunday, September 6, 2026

ಕಾವ್ಯ ಕೆ. ನಾಯಕ್ ಅವರಿಗೆ ಡಾಕ್ಟರೇಟ್ ಪದವಿ

ಕಾವ್ಯ ಕೆ. ನಾಯಕ್ ಅವರಿಗೆ ಡಾಕ್ಟರೇಟ್ ಪದವಿ

Date:

ಮಂಗಳೂರು, ಜು.12: ತುಂಬೆಯ ಕಾವ್ಯ. ಕೆ. ನಾಯಕ್ ಅವರಿಗೆ ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕರಾದ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್ ಕಂಟಿನ್ಯುವಸ್ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ಸ್ ಫಾರ್ ಎಫೆಕ್ಟಿವ್ ಮ್ಯಾನೇಜ್ಮೆಂಟ್ ಆಫ್ ಡಯಾಬಿಟಿಸ್” ಎಂಬ ಮಹಾಪ್ರಬಂಧವನ್ನು ಮಂಡಿಸಿದ್ದರು. ಈ ಮಹತ್ವದ ಸಂಶೋಧನೆ ಡಯಾಬಿಟಿಸ್ ನಿಖರ ನಿರ್ವಹಣೆಗೆ ಸಹಾಯ ಮಾಡುವ ಎಲೆಕ್ಟ್ರೋಕೆಮಿಕಲ್ ತಂತ್ರಜ್ಞಾನಾಧಾರಿತ ನಿರಂತರ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ ಅಭಿವೃದ್ಧಿಯ ಬಗ್ಗೆ ಆಳವಾದ ಅಧ್ಯಯನವನ್ನು ಒಳಗೊಂಡಿದೆ.

ಡಾ. ಕಾವ್ಯ ಕೆ. ನಾಯಕ್ ಅವರು ತುಂಬೆಯ ರೂಪ ಮತ್ತು ಕೆ. ಕೃಷ್ಣ ನಾಯಕ್ ದಂಪತಿಯ ಪುತ್ರಿಯಾಗಿದ್ದು, ಮಂದರ್ಕೆಯ ಗಿರೀಶ್ ಎನ್. ಪೈ ಅವರ ಧರ್ಮಪತ್ನಿಯಾಗಿದ್ದಾರೆ. ಪ್ರಸ್ತುತ ಅವರು ಬೆಂಗಳೂರು ನಗರದ ಆರ್‌ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!