Saturday, February 28, 2026
Saturday, February 28, 2026

ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ಅಜ್ಮತ್ ಅಲಿ

ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ಅಜ್ಮತ್ ಅಲಿ

Date:

ಮಂಗಳೂರು, ಜು.29: ಮಾದಕ ದ್ರವ್ಯ ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು ಎಂದು ಬಂದರು ಉತ್ತರ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ಅಜ್ಮತ್ ಅಲಿ ಹೇಳಿದರು. ಅವರು ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ಮಾತನಾಡುತ್ತಿದ್ದರು. ಕಾಲೇಜುಗಳಲ್ಲಿ ಮಾದಕದ್ರವ್ಯ ತಡೆ ಸಮಿತಿಯ ಕಾರ್ಯನಿರ್ವಹಣೆ, ಅನಾಮಿಕರಾಗಿ ಕ್ಯೂಆರ್ ಕೋಡ್ ಮೂಲಕ ಪೋಲಿಸ್ ಇಲಾಖೆಗೆ ದೂರು ಸಲ್ಲಿಸುವ ಸೌಲಭ್ಯ, ಮಾದಕದ್ರವ್ಯ ಕೇಸಿನಲ್ಲಿ ಸಿಲುಕಿಕೊಂಡರೆ ಆಗುವ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ವಿವರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ವಹಿಸಿದ್ದರು. ಕಾಲೇಜಿನ ಅವರಣವನ್ನು ಮಾದಕದ್ರವ್ಯ ಮುಕ್ತಗೊಳಿಸಲು ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆ ಅವರು ವಿವರಿಸಿದರು. ಇದರ ಅಂಗವಾಗಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಹೆತ್ತವರು ಸಹಿ ಮಾಡಿ ಸಲ್ಲಿಸಬೇಕಾದ ವಿಶೇಷ ಮುಚ್ಚಳಿಕೆ ಪತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಮಾದಕದ್ರವ್ಯ ತಡೆ ಸಮಿತಿಯ ಸಂಯೋಜಕರಾದ ಡಾ. ಲೋಕೇಶ್‌ನಾಥ್ ಬಿ., ಸಮಿತಿಯ ಇತರ ಸದಸ್ಯರು, ಬೋಧಕ ವರ್ಗದವರು ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಸ್ವಾಗತಿಸಿ, ಐಕ್ಯೂಎಸಿ ಸಹ-ಸಂಯೋಜಕಿ ಡಾ. ಜ್ಯೋತಿಪ್ರಿಯಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್ ವಂದಿಸಿದರು. 2025-26ನೇ ಸಾಲಿನಲ್ಲಿ ಪ್ರಥಮ ಪದವಿಗೆ ಪ್ರವೇಶ ಪಡೆದಿರುವ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಪದ ದೇಶೀಯ ಕಲೆಗಳ ಕಾರ್ಯಾಗಾರ

ಉಡುಪಿ, ಫೆ.28: ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಪದಪ್ರಧಾನ ಸಮಾರಂಭ

ಬ್ರಹ್ಮಾವರ, ಫೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ನೂತನ ಅಧ್ಯಕ್ಷ...

ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ; ಭಾರತೀಯ ವಿಜ್ಞಾನಿಗಳ ಕೊಡುಗೆ

ಪ್ರತಿ ವರ್ಷ ಫೆಬ್ರವರಿ 28ರಂದು ಆಚರಿಸುವ ರಾಷ್ಟ್ರೀಯ ವಿಜ್ಞಾನ ದಿನವು ಕೇವಲ...

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...
error: Content is protected !!