Sunday, September 27, 2026
Sunday, September 27, 2026

ಅವಕಾಶಗಳ ಸದ್ಬಳಕೆ ಮಾಡಿ: ವೇದವ್ಯಾಸ ಕಾಮತ್

ಅವಕಾಶಗಳ ಸದ್ಬಳಕೆ ಮಾಡಿ: ವೇದವ್ಯಾಸ ಕಾಮತ್

Date:

ಮಂಗಳೂರು, ಜು.29: ಕಾಲೇಜಿನಲ್ಲಿ ದೊರೆಯುವ ಎಲ್ಲಾ ಅವಕಾಶ ಹಾಗೂ ಅನುಭವಗಳನ್ನು ಬಳಸಿಕೊಂಡು ನಾವು ಬೆಳೆಯಬೇಕು. ನಮ್ಮ ಬೆಳವಣಿಗೆಗೆ ಕಾರಣರಾದ ಹೆತ್ತವರು, ಶಿಕ್ಷಕರಿಗೆ ಋಣಿಯಾಗಿರುವುದರ ಜೊತೆಗೆ ದೇಶಕ್ಕೂ ಕೃತಜ್ಞರಾಗಿರಬೇಕು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕಿ ಪ್ರೊ. ಡಾ. ಕವಿತಾ ಕೆ.ಆರ್. ಮಾತನಾಡಿ, ಮುಂದಿನ ಮೂರು ವರ್ಷದಲ್ಲಿ ನಿಮಗೆ ಕಾಲೇಜಿನಲ್ಲಿ ಕಲಿಕೆಗೆ ಸಾಕಷ್ಟು ಅವಕಾಶವಿದೆ. ಆ ಮೂಲಕ ಜ್ಞಾನ ಹಾಗೂ ಕೌಶಲ್ಯ ಗಳಿಸಿಕೊಂಡು ಭವಿಷ್ಯಕ್ಕೆ ಸನ್ನದ್ಧರಾಗಬೇಕು ಎಂದು ಹೇಳಿದರು. ಮಂಗಳೂರು ಬಂದರು ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅಜ್ಮತ್ ಆಲಿ ಜಿ. ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸೈಬರ್ ಅಪರಾಧ ಮತ್ತು ಮಾದಕವಸ್ತು ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ. ವಹಿಸಿ, ಕಾಲೇಜಿನ ನೀತಿ-ನಿಯಮಗಳ ಬಗ್ಗೆ, ಶಿಸ್ತು ಪಾಲನೆಯ ಮಹತ್ವದ ಬಗ್ಗೆ ವಿವರಿಸಿದರು.

ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಸ್ವಾಗತಿಸಿ, ಐಕ್ಯೂಎಸಿ ಸಹ- ಸಂಯೋಜಕಿ ಡಾ. ಜ್ಯೋತಿಪ್ರಿಯಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್ ವಂದಿಸಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ವೇದಿಕೆಗಳ ಸಂಯೋಜಕರು ಹಾಗೂ ಬೋಧಕರು ಉಪಸ್ಥಿತರಿದ್ದರು. ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪದವಿಗೆ ಪ್ರವೇಶ ಪಡೆದಿರುವ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!