Sunday, October 4, 2026
Sunday, October 4, 2026

ವಿದ್ಯುಕ್ತವಾಗಿ ಉದ್ಘಾಟನೆಗೊಂಡ ಕುಡ್ಲದ ಪಿಲಿ ಪರ್ಬ 2025

ವಿದ್ಯುಕ್ತವಾಗಿ ಉದ್ಘಾಟನೆಗೊಂಡ ಕುಡ್ಲದ ಪಿಲಿ ಪರ್ಬ 2025

Date:

ಮಂಗಳೂರು, ಸೆ.30: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4 ರ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.

ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 10 ಹುಲಿವೇಷ ತಂಡಗಳಿಗೂ ಗಣ್ಯರು ಶುಭ ಹಾರೈಸಿ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತವನ್ನು ಕೋರಿದರು.

ಸ್ಪರ್ಧಾಕೂಟವು ಮಂಗಳವಾರ ರಾತ್ರಿಯವರೆಗೂ ಅದ್ದೂರಿಯಾಗಿ ಸಾಗಲಿದ್ದು ಅಂತಿಮವಾಗಿ ವಿಜೇತ ತಂಡದ ಘೋಷಣೆಯಾಗಲಿದೆ. ಈ ನಡುವೆ ವೀಕ್ಷಕರಿಗಾಗಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿರುವುದು ವಿಶೇಷ.

ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ವಿ.ಕೆ ಫರ್ನಿಚರ್ಸ್ ನ ವಿಠ್ಠಲ್ ಕುಲಾಲ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಕಿರಣ್ ಶೆಣೈ, ಚೇತನ್ ಕಾಮತ್, ಸಹಾನ್, ಜಗದೀಶ್ ಕದ್ರಿ, ವಿಖ್ಯಾತ್ ಶೆಟ್ಟಿ, ಅನಿಲ್ ಬೋಳೂರು, ಸಂಜಯ್ ಪೈ, ನರೇಶ್ ಪ್ರಭು, ನಿಕಟಪೂರ್ವ ಪಾಲಿಕೆ ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!