Thursday, July 30, 2026
Thursday, July 30, 2026

ಕೃಷ್ಣಾಪುರ ಶ್ರೀಗಳಿಗೆ ಮಂಗಳೂರಿನಲ್ಲಿ ಪೌರ ಸನ್ಮಾನ

ಕೃಷ್ಣಾಪುರ ಶ್ರೀಗಳಿಗೆ ಮಂಗಳೂರಿನಲ್ಲಿ ಪೌರ ಸನ್ಮಾನ

Date:

ಮಂಗಳೂರು: ಉಡುಪಿ ಪರ್ಯಾಯ ಪೀಠವನ್ನೇರಲಿರುವ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಪೌರ ಸನ್ಮಾನ ನಗರದ ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಧ್ಯಾನ ಮಂದಿರದಲ್ಲಿ ನಡೆಯಿತು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಪೌರ ಸನ್ಮಾನ ನೆರವೇರಿಸಿ ಮಾತನಾಡಿ, ಪ್ರತಿ ಬಾರಿ ಉಡುಪಿ ಪರ್ಯಾಯ ಪೀಠವನ್ನೇರುವ ಶ್ರೀಗಳಿಗೆ ಮಂಗಳೂರಿನಲ್ಲಿ ಪೌರ ಸನ್ಮಾನ ನೆರವೇರಿಸುತ್ತಿರುವುದು ನಮ್ಮ ಸೌಭಾಗ್ಯ. ಪರ್ಯಾಯ ಹಾಗೂ ಎಲ್ಲಾ ಕಾರ್ಯಕ್ರಮಗಳು ನಿರ್ವಿಘ್ನವಾಗಿ ನೆರವೇರಲಿ ಎಂದರು.

ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ಕೃಷ್ಣಾಪುರ ಶ್ರೀಗಳ ಪರ್ಯಾಯದ ಅವಧಿಯಲ್ಲಿ ನಾನಾ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವುದರ ಮೂಲಕ ಎರಡು ವರ್ಷದ ಪರ್ಯಾಯ ಅವಧಿ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ಅಭಿನಂದನಾ ನುಡಿಗಳನ್ನಾಡಿ, ಕೃಷ್ಣಾಪುರ ಶ್ರೀಗಳು ಯಾವುದೇ ಪ್ರಚಾರ, ಪ್ರಸಿದ್ದಿಯನ್ನು ಬಯಸದೆ ಶಾಸ್ತ್ರ ಅಧ್ಯಯನ, ಪೂಜೆ, ತಪಸ್ಸು ಮುಂತಾದವುಗಳನ್ನು ಮಾಡಿಕೊಂಡೇ ಸಮಯ ಕಳೆಯುತ್ತಿದ್ದಾರೆ.

ವಿದ್ಯಾಸಂಸ್ಥೆಯನ್ನೂ ನಡೆಸಿ, ವಿದ್ಯಾರ್ಥಿಗಳಿಗೆ ಬೇಕಾದ ತರಬೇತಿಯನ್ನೂ ನೀಡುತ್ತಿದ್ದಾರೆ. ಮಠದಲ್ಲಿ ವೇದಾಧ್ಯಯನ ಮಾಡುವವರಿಗಾಗಿ ಬೇಕಾದ ಸಕಲ ವ್ಯವಸ್ಥೆಯನ್ನೂ ಅವರು ಮಾಡುತ್ತಿದ್ದಾರೆ. ಅವರ ಎರಡು ವರ್ಷದ ಪರ್ಯಾಯದ ಅವಧಿಯಲ್ಲಿ ಭಾರತದ ಶ್ರೇಯೋಭಿವೃದ್ಧಿಗೆ ಶೀಕೃಷ್ಣನ ಪೂಜಾ ಕೈಂಕರ್ಯ ಮಾಡುತ್ತಾ ವಿಶೇಷವಾಗಿ ಪ್ರಾರ್ಥಿಸಿ, ಇದರಿಂದ ಭಗವಂತ ಸಂತುಷ್ಟನಾಗಿ ಇಡೀ ನಾಡಿಗೆ ಮಂಗಳವನ್ನುಂಟು ಮಾಡಲಿ ಎಂದು ಶುಭ ಹಾರೈಸಿದರು.

ಕಟೀಲು ಲಕ್ಷ್ಮೀನಾರಾಯಣ ಆಸ್ರಣ್ಣ, ಶರವು ರಾಘವೇಂದ್ರ ಶಾಸ್ತ್ರಿ, ಉಪ ಮೇಯರ್ ಸುಮಂಗಲಾ ರಾವ್, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ಪೂರ್ಣಿಮಾ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮಾನಂದ ಹೆಗ್ಡೆ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಕಿನ್ನಿಗೋಳಿಯ ಭುವನಾಭಿರಾಮ ಉಡುಪ, ಕದ್ರಿ ನವನೀತ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

ಕಾರ್ಯಕ್ರಮ ಸಂಘಟಕ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ದಯಾನಂದ ಕಟೀಲು ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!