ಮಂಗಳೂರು: ಡಾ. ಪಿ. ದಯಾನಂದ ಪೈ- ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ಇಸ್ಕಾನ್ ಅಕ್ಷಯ ಪಾತ್ರೆಯ ಉಪಾಧ್ಯಕ್ಷ ಸನಂದನಾದಾಸ ಅವರ ವತಿಯಿಂದ 100 ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಅಗತ್ಯವಿರುವ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕಿಟ್‌ನಲ್ಲಿ ಸುಮಾರು 16 ಬಗೆಯ ಆಹಾರ ಸಾಮಾಗ್ರಿಗಳಿದ್ದು, ಸಣ್ಣ ಕುಟುಂಬಕ್ಕೆ 12 ದಿನಗಳಿಗೆ ಸಾಕಾಗುವಷ್ಟಿದ್ದು, ಇದರಿಂದ ಆರ್ಥಿಕವಾಗಿ ಹಿಂದುಳಿದ ಉನ್ನತ ಶಿಕ್ಷಣದ ಕನಸನ್ನು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಿರುತ್ತದೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಹೆಬ್ಬಾರ್ ಸಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆ ವಹಿಸಿ ಓದಿ ಕನಸನ್ನು ನನಸಾಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಿಟ್ ವಿತರಿಸಿದ ಅಕ್ಷಯ ಪಾತ್ರೆಗೆ ಕೃತಜ್ಞತೆಯನ್ನು ಸಲ್ಲಿಸಿದರು.
ಉಪಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಾಗಪ್ಪ ಗೌಡ ಕೆ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಸುವರ್ಣಮಾಲಿನಿ ಬಿ, ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.