Saturday, August 29, 2026
Saturday, August 29, 2026

ರಥಬೀದಿ ಕಾಲೇಜು- ಆಹಾರ ಕಿಟ್ ವಿತರಣೆ

ರಥಬೀದಿ ಕಾಲೇಜು- ಆಹಾರ ಕಿಟ್ ವಿತರಣೆ

Date:

ಮಂಗಳೂರು: ಡಾ. ಪಿ. ದಯಾನಂದ ಪೈ- ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ಇಸ್ಕಾನ್ ಅಕ್ಷಯ ಪಾತ್ರೆಯ ಉಪಾಧ್ಯಕ್ಷ ಸನಂದನಾದಾಸ ಅವರ ವತಿಯಿಂದ 100 ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಅಗತ್ಯವಿರುವ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕಿಟ್‌ನಲ್ಲಿ ಸುಮಾರು 16 ಬಗೆಯ ಆಹಾರ ಸಾಮಾಗ್ರಿಗಳಿದ್ದು, ಸಣ್ಣ ಕುಟುಂಬಕ್ಕೆ 12 ದಿನಗಳಿಗೆ ಸಾಕಾಗುವಷ್ಟಿದ್ದು, ಇದರಿಂದ ಆರ್ಥಿಕವಾಗಿ ಹಿಂದುಳಿದ ಉನ್ನತ ಶಿಕ್ಷಣದ ಕನಸನ್ನು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಿರುತ್ತದೆ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಹೆಬ್ಬಾರ್ ಸಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆ ವಹಿಸಿ ಓದಿ ಕನಸನ್ನು ನನಸಾಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಿಟ್ ವಿತರಿಸಿದ ಅಕ್ಷಯ ಪಾತ್ರೆಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಉಪಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಾಗಪ್ಪ ಗೌಡ ಕೆ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಸುವರ್ಣಮಾಲಿನಿ ಬಿ, ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!