Thursday, October 1, 2026
Thursday, October 1, 2026

ಯಕ್ಷಗಾನ ಕಲಾವಿದರ ಬಗ್ಗೆ ಪುರುಷೋತ್ತಮ ಬಿಳಿಮಲೆ ಹೇಳಿಕೆ ಸಹಿಸಲು ಸಾಧ್ಯವಿಲ್ಲ: ವೇದವ್ಯಾಸ ಕಾಮತ್ ಆಕ್ರೋಶ

ಯಕ್ಷಗಾನ ಕಲಾವಿದರ ಬಗ್ಗೆ ಪುರುಷೋತ್ತಮ ಬಿಳಿಮಲೆ ಹೇಳಿಕೆ ಸಹಿಸಲು ಸಾಧ್ಯವಿಲ್ಲ: ವೇದವ್ಯಾಸ ಕಾಮತ್ ಆಕ್ರೋಶ

Date:

ಮಂಗಳೂರು, ನ.19: ಯಕ್ಷಗಾನ ಕಲಾವಿದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಯಕ್ಷಗಾನವು ಕರಾವಳಿ ಕರ್ನಾಟಕದ ಗಂಡು ಕಲೆಯಾಗಿದ್ದು, ಅದು ಭಕ್ತಿ ಭಾವದಿಂದ ಕೂಡಿದ ನಮ್ಮ ಸಂಸ್ಕೃತಿಯ ಭಾಗವಾಗಿದೆ. ಯಕ್ಷಗಾನ ಕಲಾವಿದರು ಸಮಾಜಕ್ಕೆ ನೀಡಿದ ಕೊಡುಗೆಗಾಗಿಯೇ ಅವರನ್ನು ಗೌರವಯುತವಾಗಿ ಕಾಣುವ ಸಮಾಜ ನಮ್ಮದು. ಹಿಂದೂ ಪರಂಪರೆಯನ್ನು ಸದಾ ಅವಹೇಳನ ಮಾಡುವುದನ್ನೇ ಪರಮ ಗುರಿಯಾಗಿಸಿಕೊಂಡಿರುವ ಎಡಪಂಥೀಯ ಬುದ್ದಿಜೀವಿಗಳು ನೀಡಿರುವ ಹೇಳಿಕೆ ಯಕ್ಷಗಾನ ಕಲಾವಿದರಿಗೆ ಮಾತ್ರವಲ್ಲ, ಇಡೀ ಹಿಂದೂ ಸಮಾಜಕ್ಕಾದ ಅವಮಾನವಾಗಿದೆ ಎಂದು ವೇದವ್ಯಾಸ ಕಾಮತ್ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಕರಾವಳಿಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಅವಮಾನಿಸಿದ ವ್ಯಕ್ತಿಯನ್ನು ಈ ಕೂಡಲೇ ಆ ಸ್ಥಾನದಿಂದ ಕೈಬಿಡಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!