ಮಂಗಳೂರು, ಡಿ.3: ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿ ಭಾಗದ ವಕೀಲರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು, ಪ್ರಾಸ್ತವಿಕವಾಗಿ ಮಾತನಾಡಿದ ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಗಳೂರು ವಕೀಲರ ಸಂಘದಿಂದ ದಶಕಗಳಿಂದ ಹೈಕೋರ್ಟ್ ಪೀಠ ಆಗಬೇಕೆಂಬ ಹೋರಾಟವನ್ನು ನಡೆಸಿಕೊಂಡು ಬರುತ್ತಿದ್ದು, ಮೂಲಭೂತ ಸೌಕರ್ಯ ಹೊಂದಿರುವ ಮಂಗಳೂರಿನಲ್ಲಿ ಕರಾವಳಿ ಭಾಗದ ಜನರ ಅನುಕೂಲಕ್ಕಾಗಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆ ಬಹಳ ಮುಖ್ಯವಾಗಿದ್ದು ಅಲ್ಲದೆ, ಈ ಭಾಗಕ್ಕೆ ಸಂಬಂಧಪಟ್ಟ ಹೈಕೋರ್ಟ್ ನಲ್ಲಿ ವಿಲೇವಾರಿ ಇರುವ ದಾವೇಗಳಲ್ಲಿ ವರ್ಷಕ್ಕೆ ಶೇಕಡ 15% ದಾವೆಗಳು ಇತ್ಯರ್ಥಾಗುತ್ತಿದ್ದು ಉಳಿದ ದಾವೆಗಳು ಹಾಗೆ ಬಾಕಿ ಉಳಿದಿರುತ್ತದೆ. ಕರಾವಳಿ ಭಾಗದ ಜನರ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಲಾಯಿತು.
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಚರ್ಚಿಸಿ ಹೈಕೋರ್ಟ್ ಪೀಠ ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆಯನ್ನು ನೀಡಿದರು. ಡಿಸೆಂಬರ್ 13 ಮತ್ತು 14 ರಂದು ಪಣಂಬೂರು ಎನ್ ಎಂ ಪಿ ಟಿ ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ವಕೀಲರ ಕ್ರಿಕೆಟ್ ಹಾಗೂ ಥ್ರೋ ಬಾಲ್ ಪಂದ್ಯಾಟದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ., ಪ್ರಧಾನ ಸರಕಾರಿ ಅಭಿಯೋಜಕರಾದ ಎಂ ಪಿ ನರೋನ್ಹ, ಟಿ ಎನ್ ಪೂಜಾರಿ, ಎಂ ಆರ್ ಬಲ್ಲಾಳ್, ಎಂ ಯಶವಂತ ಮರೋಳಿ, ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್., ಜೊತೆ ಕಾರ್ಯದರ್ಶಿ ಜ್ಯೋತಿ, ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಡಿಕೋಸ್ಟ, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ಜಗನ್ನಾಥ ರೈ, ಮೂಡುಬಿದ್ರೆ ವಕೀಲರ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಜಗದೀಶ್ ಶೇಣವ, ಸಮನಾ ಶರಣ್, ಮಹಮ್ಮದ್ ಅಸ್ಗರ್, ಶಾಲಿನಿ ಹಾಗೂ ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದ ವಕೀಲರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.




By
ForthFocus™