Wednesday, March 25, 2026
Wednesday, March 25, 2026

ರಥಬೀದಿ ಕಾಲೇಜು: ಕ್ಯಾನ್ಸ‌ರ್ ಜಾಗೃತಿ ಕಾರ್ಯಾಗಾರ

ರಥಬೀದಿ ಕಾಲೇಜು: ಕ್ಯಾನ್ಸ‌ರ್ ಜಾಗೃತಿ ಕಾರ್ಯಾಗಾರ

Date:

ಮಂಗಳೂರು, ಫೆ.20: ಮಂಗಳೂರು ರಥಬೀದಿಯಲ್ಲಿರುವ ಡಾ. ಪಿ ದಯಾನಂದ ಪೈ- ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಯುವ ರೆಡ್ ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಯೆನೆಪೋಯ ವೈದ್ಯಕೀಯ ಕಾಲೇಜು, ದೇರಳಕಟ್ಟೆ, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸ‌ರ್ ರೋಗದ ಬಗ್ಗೆ ಆರೋಗ್ಯ ಮಾಹಿತಿ ಕಾರ್ಯಾಗಾರ ಕಾಲೇಜು ಸಭಾಂಗಣದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ರೇಷ್ಮ. ಟಿ.ಎಮ್., ವೈದ್ಯಾಧಿಕಾರಿಗಳು, ಸಮುದಾಯ ವೈದ್ಯಕೀಯ ವಿಭಾಗ ಯೆನೆಪೋಯ ಮೆಡಿಕಲ್ ಕಾಲೇಜು, ದೇರಳಕಟ್ಟೆ, ಮಂಗಳೂರು ಇವರು ಕ್ಯಾನ್ಸರ್ ರೋಗದ ಗುಣಲಕ್ಷಣಗಳು, ರೋಗ ನಿಧಾನ, ರೋಗ ಚಿಕಿತ್ಸಾ ವಿಧಾನಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿ, ವಿದ್ಯಾರ್ಥಿಗಳು ಹಾಗೂ ಬೋಧಕರ ಸಂದೇಹಗಳನ್ನು ಪರಿಹರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಜಯಕರ ಭಂಡಾರಿ ಎಂ. ವಹಿಸಿದ್ದರು. ಈ ರೀತಿಯ ಕಾರ್ಯಕ್ರಮಗಳಿಂದ ಪಡೆಯುವ ಅರಿವಿನ ನೆರವಿನಿಂದ ವಿದ್ಯಾರ್ಥಿಗಳು ಆರೋಗ್ಯದ ಜೀವನಶೈಲಿಯನ್ನು ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ, ಯುವ ರೆಡ್‌ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಮಹಿಳಾ ವೇದಿಕೆ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಗಳ ಸಂಯೋಜಕರು, ಸಹ ಸಂಯೋಜಕರು, ಯೆನೆಪೋಯ ಆಸ್ಪತ್ರೆಯ ಅರೋಗ್ಯ ನಿರೀಕ್ಷಕರು ಉಪಸ್ಥಿತರಿದ್ದರು.

ತೃಷಾ ಅತಿಥಿಗಳನ್ನು ಪರಿಚಯಿಸಿ, ಸ್ವಾತಿ ಸ್ವಾಗತಿಸಿ, ಶರಣ್ಯ ವಂದಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂ ಸೇವಕರು, ಯುವ ರೆಡ್ ಕ್ರಾಸ್ ವಿದ್ಯಾರ್ಥಿಗಳು, ಉಪನ್ಯಾಸಕರು ಕಾರ್ಯಾಗಾರದ ಫಲಾನುಭವಿಗಳಗಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಾದ್ಯಂತ ಇಂಧನ ಕೊರತೆ ಇಲ್ಲ: ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ

ನವದೆಹಲಿ, ಮಾ.25: ದೇಶಾದ್ಯಂತ ಇಂಧನ ಕೊರತೆ ಇಲ್ಲ ಎಂದು ಭಾರತ್ ಪೆಟ್ರೋಲಿಯಂ...

ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ: ಸರ್ಕಾರ

ನವದೆಹಲಿ, ಮಾ.25: ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ...

ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ಮನು ಪಟೇಲ್ ಬಿ.ವೈ

ಉಡುಪಿ, ಮಾ.25: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ...

ಏರ್ಲಪಾಡಿ: ಗಾಳಿ ಮಳೆಗೆ ಮನೆಯ ಮೇಲೆ ಮರ ಬಿದ್ದು ಹಾನಿ

ಉಡುಪಿ, ಮಾ.25: ಮಂಗಳವಾರ ಜಿಲ್ಲೆಯ ಕೆಲವೆಡೆ ಸುರಿದ ಗಾಳಿ ಮಳೆಗೆ ಅಲ್ಲಲ್ಲಿ...
error: Content is protected !!