Tuesday, July 28, 2026
Tuesday, July 28, 2026

ಮಂಗಳೂರು ವಿವಿ ಪದವಿ ಪರೀಕ್ಷೆ: ರಥಬೀದಿ ಪದವಿ ಕಾಲೇಜಿಗೆ ಎರಡು ರ‍್ಯಾಂಕ್

ಮಂಗಳೂರು ವಿವಿ ಪದವಿ ಪರೀಕ್ಷೆ: ರಥಬೀದಿ ಪದವಿ ಕಾಲೇಜಿಗೆ ಎರಡು ರ‍್ಯಾಂಕ್

Date:

ಮಂಗಳೂರು, ಮಾ.4: 2024-25 ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಗಳಲ್ಲಿ ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ- ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಎರಡು ರ‍್ಯಾಂಕ್‌ಗಳನ್ನು ಗಳಿರುತ್ತಾರೆ.

ಪ್ರಿಯಾ ಕೆ., ಬಿ.ಎಸ್.ಡಬ್ಲೂ ಪದವಿಯಲ್ಲಿ ದ್ವಿತೀಯ ರ‍್ಯಾಂಕ್ ಮತ್ತು ಪ್ರಗತಿ ಬಿ.ಎಸ್ಸಿ ಪದವಿಯಲ್ಲಿ ಏಳನೇ ರ‍್ಯಾಂಕ್ ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಎಲ್ಲಾ ಬೋಧಕ/ಬೋಧಕೇತರರು, ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಿ. ವೇದವ್ಯಾಸ ಕಾಮತ್ ಮತ್ತು ಎಲ್ಲಾ ಸದಸ್ಯರು, ಕಾಲೇಜು ಪೋಷಕರಾದ ಡಾ. ಪಿ. ದಯಾನಂದ ಪೈ-ಪಿ ಸತೀಶ್ ಪೈ ಸಹೋದರರು, ವಿದ್ಯಾರ್ಥಿಗಳು, ರಕ್ಷಕ-ಶಿಕ್ಷಕ ಸಂಘ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಮತ್ತು ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!