Saturday, June 13, 2026
Saturday, June 13, 2026

ಸಮಾಜಶಾಸ್ತ್ರ ಸಿದ್ದಾಂತಗಳು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿರಬೇಕು: ಡಾ. ಗಿರಿಧರ ರಾವ್ ಎಂ.ಎಸ್

ಸಮಾಜಶಾಸ್ತ್ರ ಸಿದ್ದಾಂತಗಳು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿರಬೇಕು: ಡಾ. ಗಿರಿಧರ ರಾವ್ ಎಂ.ಎಸ್

Date:

ಮಂಗಳೂರು, ಮಾ.19: ಸಮಾಜಶಾಸ್ತ್ರ ಸಿದ್ಧಾಂತಗಳು ಅನ್ವಯಿಕವಾಗಿ ಬಳಕೆಯಾಗಬೇಕು ಮತ್ತು ಅವುಗಳು ಸಾಮಾಜಿಕ ಅಭಿವೃದ್ಧಿಗೆ ಅಡಿಪಾಯವಾಗಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಡಾ.ಗಿರಿಧರ ರಾವ್ ಎಂ.ಎಸ್ ಹೇಳಿದರು. ಅವರು ಡಾ. ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಹಾಗೂ ಮಂಗಳೂರು ಸಮಾಜಶಾಸ್ತ್ರ ಸಂಘದ ಸಹಯೋಗದಲ್ಲಿ ನಡೆದ ಡಾ. ಟಿ.ಕೆ.ವಿ. ಭಟ್ ಸ್ಮಾರಕ ದತ್ತಿ ಉಪನ್ಯಾಸದಲ್ಲಿ “ಲಿಂಕಿಂಗ್‌ ಥಿಯರಿ ಟು ಪ್ರಾಕ್ಟೀಸ್‌” ಎಂಬ ವಿಷಯದ ಮೇಲೆ ಮಾತನಾಡುತ್ತಿದ್ದರು. ರಾಜಕೀಯ ನೀತಿ ರಚನೆ, ಮಹಿಳಾ ಸಬಲೀಕರಣ, ಸಮುದಾಯ ಸಬಲೀಕರಣ, ಸಮುದಾಯ ಸಹಭಾಗಿತ್ವ ಮತ್ತು ಆರೋಗ್ಯ ಅಭಿವೃದ್ಧಿಯಲ್ಲಿ ಸಮಾಜಶಾಸ್ತ್ರ ಸಿದ್ಧಾಂತಗಳ ಅನ್ವಯಿಕತೆಯ ಬಗ್ಗೆ ಅವರು ವಿವರಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ವಿಶ್ರಾಂತ ಪ್ರಾಧ್ಯಾಪಕ ಡಾ.ರಿಚರ್ಡ್‌ ಪಾಯಸ್ ಅವರು‌ ಡಾ.ಟಿ.ಕೆ.ವಿ. ಭಟ್‌ ಅವರನ್ನು ಪರಿಚಯಿಸಿ ಸಮಾಜಶಾಸ್ತ್ರಕ್ಕೆ ಅವರ ಕೊಡುಗೆಗಳನ್ನು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ., ಮಂಗಳೂರು ಸಮಾಜಶಾಸ್ತ್ರ ಸಂಘದ ಅರ್ಧವಾರ್ಷಿಕ ನಿಯತಕಾಲಿಕೆ ಸಮಾಜ ಶೋಧನಾವನ್ನು ಬಿಡುಗಡೆಗೊಳಿಸಿದರು. ಮಂಗಳೂರು ವಿ.ವಿ.ಯ ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ. ವಿನಯ ರಜತ್‌ ಸಮಾಜ ಶೋಧನಾ ಪತ್ರಿಕೆಯನ್ನು ಪರಿಚಯಿಸಿದರು. ಡಾ. ದುಗ್ಗಪ್ಪ ಕಜೆಕಾರ್‌ ಸ್ವಾಗತಿಸಿ, ಸಮಾಜಶಾಸ್ತ್ರ ಸಂಘದ ಕಾರ್ಯದರ್ಶಿ ಡಾ. ರಾಜೇಂದ್ರ ಕೆ. ವಂದಿಸಿದರು. ಅಂತಿಮ ಬಿ.ಎ. ವಿದ್ಯಾರ್ಥಿ ಅಕ್ಷರ ಪ್ರಾರ್ಥಿಸಿ, ಪೂರ್ಣಪ್ರಜ್ಞಾ ಕಾಲೇಜಿನ ಅಧ್ಯಾಪಕ ಡಾ. ರಾಘವೇಂದ್ರ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!