Monday, September 28, 2026
Monday, September 28, 2026

ಸಹಭಾಗೀ ಸಾಮಾಜಿಕ ಸಂಶೋಧನೆ ಇಂದಿನ ಅಗತ್ಯ: ಪ್ರೊ. ಸುನೀತಾ ವಿ

ಸಹಭಾಗೀ ಸಾಮಾಜಿಕ ಸಂಶೋಧನೆ ಇಂದಿನ ಅಗತ್ಯ: ಪ್ರೊ. ಸುನೀತಾ ವಿ

Date:

ಮಂಗಳೂರು, ಮಾ.25: ಸಮಾಜವಿಜ್ಞಾನಗಳ ಸಂಶೋಧನೆಯು ಪ್ರಶ್ನೆಗಳಿಗೆ ಮಾತ್ರ ಸೀಮಿತವಾಗದೆ ಸಂಶೋಧಕನ ಅನುಭಾವದ ಜ್ಞಾನದ ನೆಲೆಯಲ್ಲಿ ಪಕ್ವವಾಗಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಉಡುಪಿ ಇಲ್ಲಿನ ಸಮಾಜಶಾಸ್ತ್ರ ಪ್ರಾಧ್ಯಾಪಕಿ ಪ್ರೊ.ಸುನೀತಾ ವಿ. ಹೇಳಿದರು. ಅಧ್ಯಯನಕಾರ ಸಂಶೋಧನಾ ಪರಿಸರದ ಭಾಗವಾದಾಗ ಸತ್ಯಾಂಶವನ್ನು ಕಾಣಲು ಸಾಧ್ಯ. ಪ್ರಚಲಿತ ವಿದ್ಯಮಾನಗಳನ್ನು ಅರ್ಥೈಸಿಕೊಳ್ಳಲು ಸೂಕ್ಷ್ಮ ದೃಷ್ಟಿಯ ಅಗತ್ಯವಿದೆ ಎಂದು ಅವರು ಹೇಳಿದರು.

ಅವರು ರಥಬೀದಿಯ ಡಾ ಪಿ. ದಯಾನಂದ ಪೈ- ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಸಂಶೋಧನಾ ಸಮಿತಿ, ಕಲಾ ಮತ್ತು ಸಮಾಜಕಾರ್ಯ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬಿ.ಎ, ಬಿ.ಎಸ್.‌ಡಬ್ಲೂ ಮತ್ತು ಎಂ.ಎಸ್.‌ಡಬ್ಲೂ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಮಾಜವಿಜ್ಞಾನ ಸಂಶೋಧನಾ ವಿಧಾನಗಳ ಕುರಿತಾದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ. ವಹಿಸಿದ್ದರು. ಐ.ಕ್ಯೂ.ಎ.ಸಿ. ಸಂಯೋಜಕ ದೇವಿವಿಪ್ರಸಾದ್, ಸಹಸಂಯೋಜಕಿ ಡಾ. ಜ್ಯೋತಿಪ್ರಿಯ, ಸಮಾಜಕಾರ್ಯ ವಿಭಾಗ ಮುಖ್ಯಸ್ಥ ಡಾ. ನಿತಿನ್ ಎ. ಚೋಲ್ವೇಕರ್, ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಡಾ. ದುಗ್ಗಪ್ಪ ಕಜೆಕಾರ್ ಸ್ವಾಗತಿಸಿ, ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಅರುಣಾ ಕುಮಾರಿ ವಂದಿಸಿದರು. ಎಂ.ಎಸ್.‌ಡಬ್ಲೂ ವಿದ್ಯಾರ್ಥಿ ಪುನೀತ್‌ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!