Sunday, October 18, 2026
Sunday, October 18, 2026

ರಥಬೀದಿ ಸರಕಾರಿ ಕಾಲೇಜು: ಕ್ಯಾಂಪಸ್ ನೇಮಕಾತಿ ಮೇಳ

ರಥಬೀದಿ ಸರಕಾರಿ ಕಾಲೇಜು: ಕ್ಯಾಂಪಸ್ ನೇಮಕಾತಿ ಮೇಳ

Date:

ಮಂಗಳೂರು, ಮಾ.30: ರಥಬೀದಿಯ ಡಾ. ಪಿ. ದಯಾನಂದ ಪೈ -ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಮತ್ತು ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಉದ್ಯೋಗ ನೇಮಕಾತಿ ಮೇಳ ಆಯೋಜಿಸಲಾಗಿತ್ತು. ಸಹಯೋಗ್ ಬಹು ರಾಜ್ಯ ಸಹಕಾರಿ ಸಂಸ್ಥೆಯ ಮಂಗಳೂರು ಶಾಖಾ ಪ್ರಬಂಧಕ ಶಿವಪ್ರಸಾದ್ ಸಿ ಎಚ್ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ ಅವರು ಮಾತನಾಡಿ, ಕ್ಯಾಂಪಸ್ ನಿಯೋಜನೆ ಡ್ರೈವ್‌ಗಳು ಶೈಕ್ಷಣಿಕ ಕಲಿಕೆ ಮತ್ತು ಉದ್ಯಮದ ಅವಶ್ಯಕತೆಗಳ ನಡುವಿನ ಅಂತರವನ್ನು ಕಡಿಮೆ ಮಾಡಲು, ವಿದ್ಯಾರ್ಥಿಗಳಿಗೆ ಆರಂಭಿಕ ವೃತ್ತಿಜೀವನದ ಅವಕಾಶಗಳು, ಆರ್ಥಿಕ ಸ್ವಾತಂತ್ರ‍್ಯ ಮತ್ತು ವೃತ್ತಿಪರ ಜಗತ್ತಿಗೆ ಒಡ್ಡಿಕೊಳ್ಳಲು ನಿರ್ಣಾಯಕವಾಗಿವೆ. ಅವು ಉದ್ಯೋಗದಾತರಿಗೆ ಕೌಶಲ್ಯಪೂರ್ಣ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ನೇರ ವೇದಿಕೆಯನ್ನು ಒದಗಿಸುತ್ತವೆ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕ ದೇವಿಪ್ರಸಾದ್, ಸಹ ಸಂಯೋಜಕಿ ಡಾ ಜ್ಯೋತಿಪ್ರಿಯ ಬಿಬಿಎ ಉಪನ್ಯಾಸಕರಾದ ಅಕ್ಷತಾ, ಪ್ರಶಾಂತ್ ಕುಮಾರ್ ಮತ್ತು ವಿವಿಧ ಕಂಪನಿಗಳ ಮಾನವ ಸಂಪನ್ಮೂಲ ನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ರಮ್ಯಾ ಪ್ರಾರ್ಥಿಸಿದರು, ವೃತ್ತಿ ಮಾರ್ಗದರ್ಶನ-ಉದ್ಯೋಗ ನಿಯೋಜನೆ ಕೋಶ ಸಂಯೋಜಕಿ ಡಾ.ಮಾಲತಿ ಸ್ವಾಗತಿಸಿ, ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಸಂಯೋಜಕಿ ಅರುಣಾ ಕುಮಾರಿ ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ಶೋಭಾಮಣಿ ವಂದಿಸಿದರು,

ಉದ್ಯೋಗ ಮೇಳದಲ್ಲಿ ಯುನೈಟೆಡ್ ಟೊಯೋಟಾ, ಅಮೇಝಾನ್, ಸಹಯೋಗ್, ಕೋಜೇಂಟ್ ಇ ಸರ್ವೀಸ್ ಲಿಮಿಟೆಡ್ ಮತ್ತು ಸೋಲಾರ ಆಕ್ಟಿವ್ ಫಾರ್ಮ ಸೈನ್ಸ್ ಕಂಪೆನಿಗಳು ವಿದ್ಯಾರ್ಥಿಗಳಿಗೆ ನೇಮಕಾತಿ ಸಂದರ್ಶನ ನಡೆಸಿದರು. ಸುಮಾರು 250 ವಿದ್ಯಾರ್ಥಿಗಳು ಉದ್ಯೋಗ ಆಕಾಂಕ್ಷಿಗಳಾಗಿ ಹೆಸರು ನೋಂದಾಯಿಸಿ ಉದ್ಯೋಗ ಮೇಳದಲ್ಲಿ ಪಾಲ್ಗೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!