Saturday, September 12, 2026
Saturday, September 12, 2026

ಸಮಾಜಕಾರ್ಯದ ಮೂಲಕ ಗ್ರಾಮಾಭಿವೃದ್ಧಿ: ವಿಶ್ವನಾಥ ರೈ ಕಡಮಾಜೆ

ಸಮಾಜಕಾರ್ಯದ ಮೂಲಕ ಗ್ರಾಮಾಭಿವೃದ್ಧಿ: ವಿಶ್ವನಾಥ ರೈ ಕಡಮಾಜೆ

Date:

ಆರ್ಲಪದವು, ಏ.6: ಡಾ. ಎಂ.ವಿ. ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಪ್ರೊಫೆಷನಲ್ ಸೈನ್ಸ್ ಅಂಡ್ ಮ್ಯಾನೇಜ್ಮೆಂಟ್, ಮಂಗಳೂರು ವತಿಯಿಂದ ಆಯೋಜಿಸಲಾದ ಗ್ರಾಮೀಣ ಶಿಬಿರ–2026 ನ್ನು ಆರ್ಲಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಉದ್ಘಾಟಿಸಲಾಯಿತು.

ಶಿಬಿರವನ್ನು ಉದ್ಘಾಟಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವಿಶ್ವನಾಥ ರೈ ಕಡಮಾಜೆ ಮಾತನಾಡಿ, ಸಮಾಜಕಾರ್ಯದ ಮನೋಭಾವದಿಂದ ವಿದ್ಯಾರ್ಥಿಗಳು ಗ್ರಾಮಾಭಿವೃದ್ಧಿಗೆ ಕೈಜೋಡಿಸಬೇಕು. ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಉತ್ಸಾಹದಿಂದ ಕಾರ್ಯನಿರ್ವಹಿಸುವುದು ಅಗತ್ಯ ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಾಣಾಜೆಯ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾ ಮಾತನಾಡಿ, ಸಮಾಜಕಾರ್ಯ ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗ್ರಾಮೀಣ ಸಮುದಾಯದ ಅಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡಬೇಕು ಎಂದು ಹೇಳಿದರು.

ಕಾರ್ತಿಕೇಯ ಇಂಡಸ್ಟ್ರೀಸ್, ಸಂಟ್ಯಾರು ಸಂಸ್ಥೆಯ ಉದ್ಯಮಿ ಜಗನ್ಮೋಹನ್ ರೈ ಸೂರಂಬೈಲು ಮಾತನಾಡಿ, ಇಂದಿನ ಯುವಕರು ಮಾದಕ ವ್ಯಸನಗಳಿಗೆ ಒಳಗಾಗುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಇದರಿಂದ ಯುವಕರನ್ನು ದೂರವಿರಿಸಲು ಸಮಾಜಕಾರ್ಯ ವಿದ್ಯಾರ್ಥಿಗಳು ಜಾಗೃತಿ ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಸುಭೋಧ ಪ್ರೌಢಶಾಲೆ, ಪಾಣಾಜೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ರವರು ಮನಸ್ಸಿದ್ದರೆ ಮಾರ್ಗ ಎಂಬ ಪ್ರೇರಣಾದಾಯಕ ಸಂದೇಶ ನೀಡಿ, ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆಯ ಮುಖ್ಯೋಪಾಧ್ಯಾಯರಾದ ಮಾಂಕು ಮೂಲ್ಯ ಗ್ರಾಮೀಣ ಶಿಬಿರದ ಅವಧಿಯಲ್ಲಿ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳು ಮತ್ತು ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.

ಡಾ. ಎಂ.ವಿ. ಶೆಟ್ಟಿ ಇನ್ಸ್ಟಿಟ್ಯೂಟ್‌ನ ಸಹಾಯಕ ಪ್ರಾಧ್ಯಾಪಕರಾದ ಸ್ವಾತಿ ಜೈನ್ ಅವರು ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಗ್ರಾಮೀಣ ಶಿಬಿರವನ್ನು ಫಲಪ್ರದವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಉಮರ್ ಜನಪ್ರಿಯ ವಹಿಸಿದ್ದರು. ಶಿಬಿರದ ವಿದ್ಯಾರ್ಥಿ ಸಂಯೋಜಕಿ ಸೂರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇನ್ನೋರ್ವ ವಿದ್ಯಾರ್ಥಿ ಸಂಯೋಜಕಿ ವರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!