Sunday, October 18, 2026
Sunday, October 18, 2026

ರಥಬೀದಿ ಕಾಲೇಜು: ಪಾಲಕರ ಸಭೆ ಮತ್ತು ಡ್ರಗ್ಸ್ ಜಾಗೃತಿ ಕಾರ್ಯಕ್ರಮ

ರಥಬೀದಿ ಕಾಲೇಜು: ಪಾಲಕರ ಸಭೆ ಮತ್ತು ಡ್ರಗ್ಸ್ ಜಾಗೃತಿ ಕಾರ್ಯಕ್ರಮ

Date:

ಮಂಗಳೂರು, ಏ.12: ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಾಲಕರ ಸಭೆ ಮತ್ತು ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮಂಗಳೂರು ಬಂದರು ಆರಕ್ಷಕ ಠಾಣೆಯ ಉಪನಿರೀಕ್ಷಕ ಶೀತಲ್ ಅಲ್ಗೋಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾದಕದ್ರವ್ಯ ವ್ಯಸನ ತಡೆಯುವಲ್ಲಿ ಹೆತ್ತವರ ಮತ್ತು ಪೋಷಕರ ಪಾತ್ರದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಕಾಲೇಜಿನಲ್ಲಿ ಕಲಿಕಾ ಸೌಲಭ್ಯಗಳ ಜೊತೆಗೆ ವಿದ್ಯಾರ್ಥಿಗಳ ಸುರಕ್ಷತೆ, ವ್ಯಕ್ತಿತ್ವ ವಿಕಸನ ಮತ್ತು ಶಿಸ್ತುಬದ್ಧ ವಾತಾವರಣ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದುಗ್ಗಪ್ಪ ಕಜೆಕಾರ್ ಸ್ವಾಗತಿಸಿದರು. ಪಾಲಕರ ಸಭೆಯ ಸಂಯೋಜಕರಾದ ನಾಗರಾಜ್ ಎಂ., ಪ್ರಾಸ್ತಾವಿಕವಾಗಿ ಮಾತನಾಡಿದರು.

ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಪ್ರೊ. ನಿವೇದಿತಾ ಸಿ. ಲೋಬೋ, ಕಾಲೇಜಿನಲ್ಲಿ ಜಾರಿಯಲ್ಲಿರುವ ವಿದ್ಯಾರ್ಥಿಗಳ ಮೆಂಟರಿಂಗ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕರಾದ ಮೈತ್ರಿಯವರು ನಿರ್ವಹಿಸಿದರು. ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ವಂದಿಸಿ, ಸಹ ಸಂಯೋಜಕಿ ಡಾ.ಜ್ಯೋತಿ ಪ್ರಿಯಾ ನಿರೂಪಿಸಿದರು. ಸಾಮಾನ್ಯ ಸಭೆಯ ನಂತರ ಪಾಲಕರೊಂದಿಗೆ ಮಾರ್ಗದರ್ಶಿ ಶಿಕ್ಷಕರು ತರಗತಿವಾರು ಆಪ್ತ ಸಮಾಲೋಚನೆ ನಡೆಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!