Monday, June 22, 2026
Monday, June 22, 2026

ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ: ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ

ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ: ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ

Date:

ಮುಲ್ಕಿ, ಏ.28: ಸಂವಿಧಾನದ ಮೂಲ ಆಶಯಗಳಾದ ಧಾರ್ಮಿಕ ಹಕ್ಕು ಶೋಷಣೆಯ ವಿರುದ್ಧ ಹಕ್ಕು ಸಾಮಾಜಿಕ ನ್ಯಾಯ ಪರಿಸರ ಸಂರಕ್ಷಣೆಯ ಕುರಿತು ಕಾರಂತರು ತಮ್ಮ ಕಾದಂಬರಿಗಳಲ್ಲಿ ವಿವರಿಸುವ ಮೂಲಕ ಸಂವಿಧಾನದ ಆಶಯಗಳನ್ನು ವ್ಯಕ್ತಪಡಿಸಿದ್ದಾರೆ ಈ ಮೂಲಕ ಸಂವಿಧಾನದ ಕುರಿತು ಜನ ಸಾಮಾನ್ಯರು ಸೃಷ್ಟಿಸಿಕೊಂಡ ಅನೇಕ ಗೊಂದಗಳಿಗೆ ಕಾದಂಬರಿಗಳಲ್ಲಿ ಉತ್ತರ ದೊರಕಿಸಿಕೊಟ್ಟಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಹಾಗೂ ಸಂವಿಧಾನ ತಜ್ಞ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ಹೇಳಿದರು.

ಅವರು ಸೋಮವಾರ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಇವರ ಸಹಯೋಗದಲ್ಲಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-೧೪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಕಾರಂತರು ತಮ್ಮ ಕಾದಂಬರಿಗಳಲ್ಲಿ ಸಮಾನತೆಯನ್ನು ಪ್ರತಿಪಾದಿಸಿದವರು. ಹಿಂದುಳಿದ ಸಮುದಾಯವನ್ನು ಮುಖ್ಯ ವಾಹಿನಿಗೆ ತರುವುದು ಕಾರಂತರ ಉದ್ದೇಶವಾಗಿದ್ದು, ಪ್ರತಿಯೊಬ್ಬರಲ್ಲೂ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವವನ್ನು ರೂಪಿಸಲು ಶ್ರಮಿಸುವುದು ಭಾರತೀಯರ ಕರ್ತವ್ಯ ಎಂದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶೈಲಜಾ ವೈ.ವಿ, ಉಪನ್ಯಾಸಕಿ ಸೌಮ್ಯ ಉಪಸ್ಥಿತರಿದ್ದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿನಿಯರಾದ ದೀಪ್ತಿ ನಿರೂಪಿಸಿ, ಲಾವಣ್ಯ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರದಂತೆ ತಡೆಯಲು ಪ್ರಾಥಮಿಕ ಶಾಲೆಗಳಲ್ಲಿ ಎಐ ಬಳಕೆ ನಿಷೇಧ

ಯು.ಬಿ.ಎನ್.ಡಿ., ಜೂ.21: ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಉತ್ಪಾದಕ ಎಐ ಪರಿಕರಗಳನನ್ನು ಬಳಸದಂತೆ...

ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ- ಏಳು ಸಾವು

ಪೆರಿಯಪಾಳಯಂ, ಜೂಲ್.21: ತಮಿಳುನಾಡಿನ ಪೆರಿಯಪಾಳಯಂನಲ್ಲಿರುವ ಸಮುದ್ರಾಹಾರ ರಫ್ತು ಕಂಪನಿಯಲ್ಲಿ ಸಂಭವಿಸಿದ ಅಮೋನಿಯಾ...

ಬಾರಿಕೆರೆ: ಹಸಿರು ಹೆಜ್ಜೆ ಕಾರ್ಯಕ್ರಮ

ಕೋಟ, ಜೂ.21: ಪಂಚವರ್ಣ ಸಂಘಟನೆ ಆರಂಭದಲ್ಲಿ ಕೈಗೊಂಡ ಪರಿಸರದ ಕಾರ್ಯ ನಿತ್ಯ...

ಬಿಗಿ ಭದ್ರತೆಯ ನಡುವೆ ನಡೆದ NEET-UG 2026 ಮರುಪರೀಕ್ಷೆ; ಪರೀಕ್ಷೆ ಬರೆದ 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು

ನವದೆಹಲಿ, ಜೂ.21: ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ...
error: Content is protected !!