Sunday, October 18, 2026
Sunday, October 18, 2026

ರಥಬೀದಿ ಕಾಲೇಜು: ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ರಥಬೀದಿ ಕಾಲೇಜು: ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

Date:

ಮಂಗಳೂರು, ಜು.23: ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಇದರ 2026-27ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಪ್ರಾರಂಭ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಓರಿಂಯಂಟೇಶನ್ ಕಾರ್ಯಕ್ರಮ ‘ಶುಭಾರಂಭ’ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ., ಅವರು ಕಾಲೇಜಿನ ನೀತಿ-ನಿಯಮಗಳ ಬಗ್ಗೆ ಶಿಸ್ತು ಪಾಲನೆಯ ಅಗತ್ಯದ ಮತ್ತು ಪದವಿ ಶಿಕ್ಷಣದ ಮಹತ್ವದ ಬಗ್ಗೆ ವಿವರಿಸಿದರು. ಮುಂದಿನ ಮೂರು ವರ್ಷಗಳಲ್ಲಿ ಜ್ಞಾನ, ಕೌಶಲ್ಯಹಾಗೂ ಜೀವನ ಮೌಲ್ಯಗಳನ್ನು ಗಳಿಸಿಕೊಂಡು ಭವಿಷ್ಯಕ್ಕೆ ಸನ್ನದ್ಧರಾಗಬೇಕು ಎಂದು ಹೇಳಿದರು. ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಮಾದಕ ದ್ರವ್ಯ ದುರ್ಬಳಕೆ ಮತ್ತು ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಸಹಾಯಕ ಪೊಲೀಸ್ ಆಯುಕ್ತ ರವೀಶ್ ನಾಯಕ್ ಮತ್ತು ಬಂದರು ಠಾಣಾ ಪೊಲೀಸ್ ನಿರೀಕ್ಷಕರಾದ ಸಚಿನ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು. ಸಿಬ್ಬಂದಿ ಪ್ರಮೋದ್ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞೆ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಂಗಳೂರು ಸಖಿ ಕೇಂದ್ರದ ಆಡಳಿತಾಧಿಕಾರಿ ಯಾ ರಾಜ್ ಮೋಹನ್ ಅವರು ಲಿಂಗ ಸಂವೇದನೆಯ ಬಗ್ಗೆ ಮತ್ತು ಮಹಿಳೆಯರ ಸುರಕ್ಷತೆ ಬಗ್ಗೆ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ವಿವಿಧ ಅಧ್ಯಯನ ವಿಭಾಗಗಳ ಮುಖ್ಯಸ್ಥರು ತಮಗೆ ಸಂಬಂಧಿಸಿದ ಕೋರ್ಸುಗಳ ಪಠ್ಯಕ್ರಮ ಮತ್ತು ಚಟುವಟಿಕೆಗಳ ಬಗ್ಗೆ ಮತ್ತು ಪಠ್ಯೇತರ ಚಟುವಟಿಕೆಗಳು ಮತ್ತು ಕ್ರೀಡಾ ಸೌಲಭ್ಯಗಳ ಬಗ್ಗೆ ಆಯಾಯ ಸಂಯೋಜಕರು ವಿವರಿಸಿದರು.

ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಸ್ವಾಗತಿಸಿ, ಐಕ್ಯೂಎಸಿ ಸಹ-ಸಂಯೋಜಕಿ ಡಾ, ಜ್ಯೋತಿಪ್ರಿಯಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ವೇದಿಕೆಗಳ ಸಂಯೋಜಕರು ಹಾಗೂ ಬೋಧಕರು ಉಪಸ್ಥಿತರಿದ್ದರು. 2026-27 ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪದವಿಗೆ ಪ್ರವೇಶ ಪಡೆದಿರುವ 525 ವಿದ್ಯಾರ್ಥಿಗಳು ಭಾಗವಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!