ಮಂಗಳೂರು, ಆ.4: ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ವಿದ್ಯಾರ್ಥಿಗಳಿಗೆ ಎಸ್‌ಐಆರ್ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ರಾಜ್ಯಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಾವೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಜಿಲ್ಲಾ ಎಸ್‌ಐಆರ್ ತರಬೇತುದಾರರಾದ ಸುಚೇತ್ ಸುವರ್ಣ ಇವರು ಭಾಗವಹಿಸಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಕುರಿತು ವಿವರವಾದ ಮಾಹಿತಿ ನೀಡಿ ಅವರ ಉದ್ದೇಶಗಳನ್ನು ಮತ್ತು ಅಗತ್ಯಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ., ಇವರು ವಿದ್ಯಾರ್ಥಿಗಳು ಎಸ್‌ಐಆರ್ ಮಾಹಿತಿಯನ್ನು ತಿಳಿದು ತಮ್ಮ ಮನೆಗಳಲ್ಲಿ ಹಾಗೂ ಸಮಾಜದಲ್ಲಿ ಎಸ್‌ಐಆರ್ ಜಾಗೃತಿ ಮೂಡಿಸುವಲ್ಲಿ ಕ್ರಮ ವಹಿಸುವಂತೆ ಸೂಚಿಸಿದರು. ತೃತೀಯ ಬಿಎ ವಿದ್ಯಾರ್ಥಿ ಆಕಾಶ್ ಸ್ವಾಗತಿಸಿ, ಅಂಬಿಕಾ ವಂದಿಸಿದರು. ಮಹೇಶ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದುಗ್ಗಪ್ಪ ಕಜೆಕಾರ್, ಐಕ್ಯೂಎಸಿ ಸಂಯೋಜಕರಾದ ದೇವಿಪ್ರಸಾದ್, ಸಹ ಸಂಯೋಜಕರಾದ ಡಾ. ಜ್ಯೋತಿಪ್ರಿಯಾ, ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಯೋಜಕರಾದ ವತ್ಸಲ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಸೀಮಾ ಬೇಗಂ ಉಪಸ್ಥಿತರಿದ್ದರು.




By
ForthFocus™