Friday, October 16, 2026
Friday, October 16, 2026

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

Date:

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ– ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗೂ ರೆಡ್ ರಿಬ್ಬನ್ ಕ್ಲಬ್‌ಗಳ ಸಹಯೋಗದಲ್ಲಿ ಯುವ ರೆಡ್‌ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವತಿಯಿಂದ ಎಚ್‌ಐವಿ/ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕರು ಹಾಗೂ ಆಪ್ತ ಸಮಾಲೋಚಕರಾದ ಮಹೇಶ್ ಯು.ಕೆ. ಅವರು ಭಾಗವಹಿಸಿ, ಎಚ್‌ಐವಿ/ಏಡ್ಸ್‌ನ ಹರಡುವಿಕೆ, ತಡೆಗಟ್ಟುವ ಕ್ರಮಗಳು, ಮುನ್ನೆಚ್ಚರಿಕೆಗಳು ಹಾಗೂ ರೋಗದ ಕುರಿತು ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ನಿವಾರಿಸುವ ಅಗತ್ಯದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಆರೋಗ್ಯಕರ ಜೀವನಶೈಲಿ ಹಾಗೂ ವೈಜ್ಞಾನಿಕ ಅರಿವು ಬೆಳೆಸಿಕೊಳ್ಳುವಂತೆ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ದುಗ್ಗಪ್ಪ ಕಜೆಕರ್ ಹಾಗೂ ಐಕ್ಯೂಎಸಿ ಸಹ- ಸಂಯೋಜಕರಾದ ಡಾ. ಜ್ಯೋತಿಪ್ರಿಯಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿ ಎಚ್‌ಐವಿ/ಏಡ್ಸ್ ಕುರಿತು ಅಗತ್ಯ ಮಾಹಿತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳಾದ ಜಯಶೀಲಾ ಕಾರ್ಯಕ್ರಮ ನಿರೂಪಿಸಿ, ಹಂಸಿನಿ ಸ್ವಾಗತಿಸಿದರು ಹಾಗೂ ಸ್ವಾತಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!