Saturday, October 17, 2026
Saturday, October 17, 2026

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

Date:

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಕಾಲೇಜು ಸಭಾಂಗಣದಲ್ಲಿ ಸಂಸ್ಕೃತ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಂ ಎಸ್.ಎಸ್ ನಾಯಕ್‌ರವರು ಸಂಸ್ಕೃತ ಭಾಷೆಯ ಪ್ರಾಚೀನತೆ, ಸಂಸ್ಕೃತ ಕವಿಗಳಾದ ಭಾಸ, ಹಾಸ, ಕಾಳಿದಾಸ, ಭಟ್ಟ, ಭಾರವಿಯವರು ಸಂಸ್ಕೃತ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಉದಾಹರಣೆ ಸಹಿತ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ದೈನಂದಿನ ಬದುಕಿನಲ್ಲಿ ಸಂಸ್ಕೃತ ಸುಭಾಷಿತಗಳ ಮಹತ್ವ ಅರಿತು ಬಾಳಲು ಕರೆ ನೀಡಿದರು.

ಕಾಲೇಜು ಐಕ್ಯೂಎಸಿ ಸಹ ಸಂಯೋಜಕಿ ಡಾ. ಜ್ಯೋತಿ ಪ್ರಿಯಾ ಸಂಸ್ಕೃತ ದಿನಾಚರಣೆಯ ಔಚಿತ್ಯವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಪ್ರೊ ಜಯಕರ ಭಂಡಾರಿ ಎಂ., ವಹಿಸಿದ್ದರು. ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಸ್ಕೃತ ಉಪನ್ಯಾಸಕರಾದ ಡಾ. ಅರವಿಂದ ಶಾನುಭಾಗ್ ಸ್ವಾಗತಿಸಿದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಮಂಜಪ್ಪ ಗೋಣಿ ಅತಿಥಿಗಳನ್ನು ಪರಿಚಯಿಸಿದರು. ಹರ್ಷಿಣಿ ಹಾಗೂ ತಂಡದವರು ಪ್ರಾರ್ಥಸಿ, ವಿದ್ಯಾರ್ಥಿನಿ ಅಮೃತ ಸಂಸ್ಕೃತ ಶ್ಲೋಕಗಳನ್ನು ವಾಚಿಸಿದರು, ಸಂಸ್ಕೃತ ಉಪನ್ಯಾಸಕಿಯಾದ ಡಾ. ವಿಜಯ ಕುಮಾರಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!