Sunday, September 27, 2026
Sunday, September 27, 2026

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

Date:

ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಯುವ ರೆಡ್‌ಕ್ರಾಸ್ ಹಾಗೂ ಮಾನಸಿಕ ಆರೋಗ್ಯ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಜಯಕರ ಭಂಡಾರಿ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್. ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಕೆಎಂಸಿ ಆಸ್ಪತ್ರೆ, ಮಂಗಳೂರು, ಅರಿವಳಿಕೆ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ರಂಜನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯ ಅಗತ್ಯತೆ, ಸರಿಯಾದ ಸಮಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಪ್ರಥಮ ಚಿಕಿತ್ಸೆಯಿಂದ ಜೀವ ಉಳಿಸುವ ಸಾಧ್ಯತೆಗಳ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್, ಐಕ್ಯೂಎಸಿ ಸಂಯೋಜಕರಾದ ದೇವಿಪ್ರಸಾದ್, ಐಕ್ಯೂಎಸಿ ಸಹ-ಸಂಯೋಜಕರಾದ ಡಾ. ಜ್ಯೋತಿಪ್ರಿಯಾ ಹಾಗೂ ಮಾನಸಿಕ ಆರೋಗ್ಯ ಸಮಿತಿಯ ಸಂಯೋಜಕರಾದ ಡಾ. ಮೊಹಮ್ಮದ್ ಇಕ್ಬಾಲ್ ಬಿ.ಎ., ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಅಶೋಕ ಸಿ.ಎಚ್., ಡಾ. ಜ್ಯೋತಿ ಪಿ. ಹಾಗೂ ಮೈತ್ರಿ ಬಿ. ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿಗಳಾದ ಜಯಶೀಲಾ ನಿರೂಪಿಸಿದರು. ನೇಹಾ ಸ್ವಾಗತಿಸಿ, ಖುಷಿ ವಂದಿಸಿದರು. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ 4 ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!