ಮಂಗಳೂರು, ಸೆ.25: ಡಾ. ಪಿ ದಯಾನಂದ ಪೈ ಪಿ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿಯ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಆಂತರಿಕ ದೂರು ಸಮಿತಿಯು ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ಪೋಕ್ಸೋ ಬಗ್ಗೆ ಕಾನೂನು ಅರಿವಿನ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸ ಇವರು ಭಾಗವಹಿಸಿ ಎಲ್ಲರಿಗೂ ಕಾನೂನು ಅರಿವಿನ ಅಗತ್ಯದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ತಡೆ ಭಿತ್ತಿಪತ್ರವನ್ನು ಅನಾವರಣಗೊಳಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ನ್ಯಾಯವಾದಿ ಮಾನಸ ಹೆಗ್ಡೆ ಇವರು ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು. ದುಡಿಯುವ ಮಹಿಳೆಯರಿಗೆ ಈ ಕಾಯ್ದೆಯ ಬಗೆಗಿನ ಅರಿವು ಇರಬೇಕೆಂದು ತಿಳಿಸಿದರು. ಗೋಪಾಲಕೃಷ್ಣ ಶೆಟ್ಟಿ, ಉಪಮುಖ್ಯ ಕಾನೂನು ನೆರವು ಅಭಿರಕ್ಷಕರು ಇವರು ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ದೇವಿಪ್ರಸಾದ್ ಉಪಸ್ಥಿತರಿದ್ದರು. ಆಂತರಿಕ ದೂರು ಸಮಿತಿಯ ಸಂಚಾಲಕರಾದ ಸುವರ್ಣಮಾಲಿನಿ ಬಿ ಸ್ವಾಗತಿಸಿದರು. ವಿದ್ಯಾರ್ಥಿನಿ ಚಂದನಾ ಪ್ರಾರ್ಥಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಸಂಯೋಜಕರು ಮತ್ತು ಆಂತರಿಕ ದೂರು ಸಮಿತಿಯ ಸದಸ್ಯರಾದ ಡಾ. ಜ್ಯೋತಿಪ್ರಿಯ ವಂದಿಸಿದರು. ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ವತ್ಸಲಾ ಪಿ ನಿರೂಪಿಸಿದರು.




By
ForthFocus™