Wednesday, September 30, 2026
Wednesday, September 30, 2026

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ ಪರಿಶೀಲಿಸಲು ಸಮಿತಿ ರಚನೆ- ಮಂಗಳೂರು ವಕೀಲರ ಸಂಘ ಸ್ವಾಗತ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ ಪರಿಶೀಲಿಸಲು ಸಮಿತಿ ರಚನೆ- ಮಂಗಳೂರು ವಕೀಲರ ಸಂಘ ಸ್ವಾಗತ

Date:

ಮಂಗಳೂರು, ಸೆ.29: ಮಂಗಳೂರು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಮೂವರು ಮಾನ್ಯ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿರುವ ಕರ್ನಾಟಕ ಹೈಕೋರ್ಟ್‌ನ ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ನಿರ್ಧಾರವನ್ನು ಮಂಗಳೂರು ವಕೀಲರ ಸಂಘ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಎಂದು ಸಂಘದ ಅಧ್ಯಕ್ಷರಾದ ಜಗದೀಶ್ ಕೆ. ಶೇಣವ ತಿಳಿಸಿದ್ದಾರೆ.

ಮಂಗಳೂರು ಸೇರಿದಂತೆ ಕರಾವಳಿ ಭಾಗದ ಜನರು ನ್ಯಾಯಾಂಗ ಸೇವೆಗಾಗಿ ಬೆಂಗಳೂರಿಗೆ ತೆರಳಬೇಕಾಗಿರುವುದರಿಂದ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಈ ಭಾಗದ ಜನರಿಗೆ ನ್ಯಾಯದ ಲಭ್ಯತೆ ಸುಲಭವಾಗುವುದರ ಜೊತೆಗೆ ಸಮಯ ಮತ್ತು ಆರ್ಥಿಕ ವೆಚ್ಚವೂ ಕಡಿಮೆಯಾಗಲಿದೆ.
ಹೈಕೋರ್ಟ್‌ನ ಇಂದಿನ ಅಧಿಸೂಚನೆಯು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಪ್ರಯತ್ನಗಳಿಗೆ ಮಹತ್ವದ ಹೆಜ್ಜೆಯಾಗಿದೆ. ಸಮಿತಿಯು ಸಂಬಂಧಪಟ್ಟ ಎಲ್ಲ ಹಿತಾಸಕ್ತಿದಾರರೊಂದಿಗೆ ಸಮಾಲೋಚನೆ ನಡೆಸಿ ವರದಿ ಸಲ್ಲಿಸಲಿದೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘವು ಮುಂದೆಯೂ ಅಗತ್ಯ ಸಹಕಾರ ಹಾಗೂ ರಚನಾತ್ಮಕ ಪ್ರಯತ್ನಗಳನ್ನು ಮುಂದುವರಿಸಲಿದೆ ಎಂದು ಜಗದೀಶ್ ಕೆ. ಶೇಣವ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!