Friday, October 23, 2026
Friday, October 23, 2026

ಮಂಗಳೂರು ರಥಬೀದಿ ಕಾಲೇಜು: ವಿ.ವಿ.ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟಕ್ಕೆ ಚಾಲನೆ

ಮಂಗಳೂರು ರಥಬೀದಿ ಕಾಲೇಜು: ವಿ.ವಿ.ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟಕ್ಕೆ ಚಾಲನೆ

Date:

ಮಂಗಳೂರು, ಅ.22: ಡಾ.ದಯಾನಂದ ಪೈ ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಮಂಗಳೂರು ಇದರ ದೈಹಿಕ ಶಿಕ್ಷಣ ವಿಭಾಗ ಹಾಗೂ ಐಕ್ಯೂಎಸಿ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟ ಚದುರಂಗ-ಚತುರ ನಡೆಗಳ ಕದನವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಮಂಗಳೂರಿನ ಡೆರಿಕ್ ಚೆಸ್ ಶಾಲೆಯ ಸಹ ಸ್ಥಾಪಕ ಪ್ರಸನ್ನ ರಾವ್ ಬಿ ಅವರು ದೀಪ ಪ್ರಜ್ವಲನೆ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ ವಿದ್ಯಾರ್ಥಿಗಳ ಬೌದ್ಧಿಕ ವಿಕಾಸ, ಕ್ರೀಡಾ ಸಂಸ್ಕೃತಿ ಮತ್ತು ಯುವ ಸಬಲೀಕರಣಗೊಳಿಸುವಲ್ಲಿ ಸಹಕಾರಿ ಎಂದು ಹೇಳಿದರು. ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ. ವಹಿಸಿ ಮಾತನಾಡಿ, ಚೆಸ್ ಪಂದ್ಯಾಟ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ತಾಳ್ಮೆ, ಬುದ್ಧಿವಂತಿಕೆ ಹಾಗೂ ತಂತ್ರಗಾರಿಕೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥೆ ಡಾ. ಅಪರ್ಣ ಆಳ್ವ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಧನ್ಯ ಅವರು ಪ್ರಾರ್ಥನೆ ಸಲ್ಲಿಸಿದರು. ಐಕ್ಯೂಎಸಿ ವಿಭಾಗದ ಸಹ ಸಂಚಾಲಕರಾದ ಡಾ.ಜ್ಯೋತಿಪ್ರಿಯ ಸ್ವಾಗತಿಸಿದರು. ಇತಿಹಾಸ ವಿಭಾಗ ಮುಖ್ಯಸ್ಥೆ ಡಾ.ಜ್ಯೋತಿ ಪಿ ವಂದಿಸಿದರು. ಕಾಲೇಜಿನ ಕ್ರೀಡಾ ಕಾರ್ಯದರ್ಶಿಗಳಾದ ಸಾತ್ವಿಕ್ ಮತ್ತು ಶಾಲಿನಿ ಅವರು ಕಾರ್ಯಕ್ರಮದ ಆಯೋಜನೆಯಲ್ಲಿ ಸಹಕರಿಸಿದರು. ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ಪರ್ಧಿಗಳು ತಮ್ಮ ಚದುರಂಗದ ಕೌಶಲ್ಯವನ್ನು ಪ್ರದರ್ಶಿಸಿದರು.

ಸತತವಾಗಿ ನಾಲ್ಕನೇ ಬಾರಿಗೆ ಪಂದ್ಯಾಟ ಆಯೋಜಿಸಲ್ಪಟ್ಟಿದ್ದು, ಮಂಗಳೂರು ವಿವಿ ವ್ಯಾಪ್ತಿಯ ೧೨ ಕಾಲೇಜುಗಳ ಪುರುಷ ಮತ್ತು ಮಹಿಳಾ ಚೆಸ್ ತಂಡಗಳು ಭಾಗವಹಿಸಿದ್ದು, ಸಮಗ್ರ ಪ್ರಥಮ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು., ದ್ವಿತೀಯ ಸ್ಥಾನವನ್ನು ಅತಿಥೇಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು., ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ತೃತೀಯ ಸ್ಥಾನವನ್ನು ಹಾಗೂ ನಾಲ್ಕನೇ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಪಡೆದುಕೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಪೆರ್ಡೂರು, ಅ.23: ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ...

ದಾರ್ಶನಿಕರ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶ, ಜೀವನ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ಅ.23: ನಾಡಿನ ಸಾಂಸ್ಕೃತಿಕ, ಸಾಮಾಜಿಕ ಮತ್ತು ಧಾರ್ಮಿಕ ಬೆಳವಣಿಗೆಗೆ ಶ್ರಮಿಸಿದ...

ಅ.24: ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಉಡುಪಿ, ಅ.23: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ...
error: Content is protected !!