ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಜಿಲ್ಲೆಯಾದ್ಯಂತ ಜುಲೈ 7 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಮುಂಜಾಗ್ರತಾ ಕ್ರಮವಾಗಿ ನಾಳೆ (ಜುಲೈ 7) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.