Wednesday, February 26, 2025
Wednesday, February 26, 2025

ಪಟ್ಲ ಫೌಂಡೇಶನ್ ಕಲಾವಿದರಿಗೆ ದಾರಿದೀಪವಾಗಲಿ: ಕನ್ಯಾನ ಸದಾಶಿವ ಶೆಟ್ಟಿ

ಪಟ್ಲ ಫೌಂಡೇಶನ್ ಕಲಾವಿದರಿಗೆ ದಾರಿದೀಪವಾಗಲಿ: ಕನ್ಯಾನ ಸದಾಶಿವ ಶೆಟ್ಟಿ

Date:

ಮಂಗಳೂರು: ಕಲಾವಿದರ ಕಷ್ಟಗಳನ್ನು ಅರಿತು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೆಲಸ ಮಾಡುತ್ತಿದೆ. ಯಕ್ಷಗಾನ‌ ಬೆಳೆಯಬೇಕು, ಕಲಾವಿದರು ಉಳಿಯಬೇಕು. ಈ ನಿಟ್ಟಿನಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರಿಗೆ ದಾರಿದೀಪವಾಗಲಿ. ರಾತ್ರಿ ಹೊತ್ತು ನಿದ್ದೆಗೆಟ್ಟು ರಂಗಸ್ಥಳದಲ್ಲಿ ಕುಣಿದಾಡುವ ಕಲಾವಿದರ ಯೋಗಕ್ಷೇಮ ವಿಚಾರಿಸುವ ಫೌಂಡೇಶನ್ ನ ಕಾರ್ಯ ಶ್ಲಾಘನೀಯ. ಕಲೆಗೆ ಬೆಲೆ ಕೊಟ್ಟು ಕಲಾವಿದರನ್ನು ಸಶಕ್ತರನ್ನಾಗಿಸುವ ಕೆಲಸ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ನಡೆಯಲಿ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷ, ಮುಂಬಯಿ ಹೇರಂಬ ಇಂಡಸ್ಟ್ರೀಸ್ ನ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ ಹೇಳಿದರು.

ಅವರು, ಕಂಕನಾಡಿ ಗರೋಡಿ ಬಳಿಯ ಅಟ್ಟಣೆ ಹೊಟೇಲ್ ಸಭಾಂಗಣದಲ್ಲಿ ನಡೆದ ಯಕ್ಷಾಶ್ರಯ ಯೋಜನೆಯಡಿಯಲ್ಲಿ ನಾಲ್ವರು ಕಲಾವಿದರಿಗೆ ಮನೆ ಕಟ್ಟಲು ತಲಾ ರೂ.2 ಲಕ್ಷ ಸಹಾಯಧನ ನೀಡಿ ಮಾತನಾಡಿದರು. ಪಟ್ಲ ಫೌಂಡೇಶನ್ ಸಂಸ್ಥೆಯನ್ನು ಇನ್ನಷ್ಟು ಆರ್ಥಿಕವಾಗಿ ಬಲಾಡ್ಯಗೊಳಿಸುವ ಕೆಲಸ ಆಗಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರದ ಅಗತ್ಯಯಿದೆ. ಅದೇ ರೀತಿ ರಾತ್ರಿ ನಿದ್ದೆಗೆಟ್ಟು ದುಡಿಯುವ ಕಲಾವಿದರ ಬಗ್ಗೆ ಯಕ್ಷಗಾನ ಮೇಳದ ಕಲಾವಿದರೂ ಗಮನಹರಿಸಬೇಕು. ಕಲಾವಿದರಿಗೆ ಸಂಬಳ ಮತ್ತಿತರ ಸೌಲಭ್ಯದ ಬಗ್ಗೆ ಯಜಮಾನರು ಗಮನಹರಿಸುವಂತಾಗಲಿ. ಯಕ್ಷಗಾನ ಬಹುದೊಡ್ಡ ಕಲೆ. ಇದನ್ನು ಉಳಿಸುವ ಕೆಲಸವಾಗಲಿ. ಅಶಕ್ತರಿಗೆ ಸಹಾಯಧನ ಯೋಜನೆ ಇದು ನಿತ್ಯ ನಿರಂತರ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ನಡೆಯಲಿದೆ ಎಂದು ಶುಭ ಹಾರೈಸಿದರು.

ಮನುಷ್ಯತ್ವ, ಪ್ರಾಮಾಣಿಕತೆಯಿಂದ ಕೆಲಸ ಮಾಡೋಣ: ಐಕಳ ಹರೀಶ್ ಶೆಟ್ಟಿ

ವೇದಿಕೆಯಲ್ಲಿದ್ದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಸಮಾಜ ಸೇವೆ ಎಂದಾಗ ಜಾತಿಯನ್ನು ಬದಿಗಿರಿಸಿ ಮನುಷ್ಯತ್ವ, ಪ್ರಾಮಾಣಿಕತೆಯಿಂದ ಕೆಲಸ ಮಾಡೋಣ. ಸರಕಾರಕ್ಕೂ ಮಾಡಲು ಸಾಧ್ಯವಾಗದ ಕೆಲಸವನ್ನು ಕಲಾವಿದರಿಗಾಗಿ ಪಟ್ಲ ಫೌಂಡೇಶನ್ ಟ್ರಸ್ಟ್ ಕೆಲಸ ಮಾಡುತ್ತಿದೆ.

ಫೌಂಡೇಶನ್ ಗೆ ಗೌರವಾಧ್ಯಕ್ಷರಾಗಿ ಸದಾಶಿವ ಶೆಟ್ಟಿ ಕನ್ಯಾನ ದೇವರಂತೆ ಒದಗಿ ಬಂದಿದ್ದಾರೆ. ಇದು ಫೌಂಡೇಶನ್ ಮತ್ತು ಕಲಾವಿದರ ಪುಣ್ಯ. ಪಟ್ಲ ಫೌಂಡೇಶನ್ ಟ್ರಸ್ಟ್ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಧ್ಯೆಯೋದ್ದೇಶ ಒಂದೇ ಅಗಿರುತ್ತದೆ. ಬಡವರ ನೆರವಿಗಾಗಿ ಬೇಡುವುದು ಮತ್ತು ಕೊಡುವುದು. ಹೀಗಾಗಿ ಕಲಾವಿದರ ಪಾಲಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ಬೆಳಕಾಗಿದೆ. ಹೃದಯ ಸಂಪತ್ತು ಇರುವವರೆಲ್ಲರೂ ಟ್ರಸ್ಟ್ ಗೆ ಶಕ್ತಿ ತುಂಬುವ ಕೆಲಸ ಮಾಡಲಿ ಎಂದರು.

ಪ್ರಾಸ್ತಾವಿಕವಾಗಿ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಫೌಂಡೇಶನ್ ಟ್ರಸ್ಟ್ ಕಳೆದ ಆರು ವರ್ಷಗಳ ಅವಧಿಯಲ್ಲಿ ಈ ವರೆಗೆ ವಿವಿಧ ಯೋಜನೆಗಳಡಿಯಲ್ಲಿ ಎಂಟೂವರೆ ಕೋಟಿ ರೂಪಾಯಿಗೂ ಮಿಕ್ಕಿ ಸಹಾಯಧನವನ್ನು ಕಲಾವಿದರಿಗೆ ವಿತರಿಸಿದೆ. ಸದಾಶಿವ ಶೆಟ್ಟಿ ಕನ್ಯಾನ ಮತ್ತು ಐಕಳ ಹರೀಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ ಮುಂದಿನ ದಿನಗಳಲ್ಲಿ ಮಹತ್ತರ ಯೋಜನೆಗಳನ್ನು ರೂಪಿಸಲಿದೆ ಎಂದರು.

ಮನೆ ಕಟ್ಟಲು ನೆರವು:
ಕಮಲಶಿಲೆ ಮೇಳದ ಲಕ್ಷಣ ಭಂಡಾರಿ, ಮಾರಣಕಟ್ಟೆ ಮೇಳದ ತಿಮ್ಮಪ್ಪ ದೇವಾಡಿಗ, ಮಂದಾರ್ತಿ ಮೇಳದ ನರಸಿಂಹ ನಾಯಕ್ ಮತ್ತು ಪೊಳಲಿಯ ಚಂದ್ರಹಾಸ ಪೂಜಾರಿ ಅವರಿಗೆ ಮನೆಕಟ್ಟಲು ತಲಾ ಎರಡು ಲಕ್ಷ ರೂಪಾಯಿಯನ್ನು ಹಸ್ತಾಂತರಿಸಲಾಯಿತು.

ವೇದಿಕೆಯಲ್ಲಿ ಟ್ರಸ್ಟ್ ನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಸ್ವಾಗತಿಸಿ ಕಾರ್ಯಕ್ರಮ‌ ನಿರ್ವಹಿಸಿದರು. ಉಪಾಧ್ಯಕ್ಷ ಡಾ. ಮನು ರಾವ್ ವಂದಿಸಿದರು. ಪಟ್ಲ ಫೌಂಡೇಶನ್ ಟ್ರಸ್ಟ್ ನ‌ ಪದಾಧಿಕಾರಿಗಳು, ಟ್ರಸ್ಟಿಗಳು ವಲಯ ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!