Wednesday, September 9, 2026
Wednesday, September 9, 2026

ಪುತ್ತಿಗೆ ಶ್ರೀಗಳಿಗೆ ತುಲಾಭಾರ

ಪುತ್ತಿಗೆ ಶ್ರೀಗಳಿಗೆ ತುಲಾಭಾರ

Date:

ಸುರತ್ಕಲ್: ಶ್ರೀ ಪುತ್ತಿಗೆ ಮಠದ ಶಾಖೆ, ನವ ವೃಂದಾವನ ಸೇವಾ ಪ್ರತಿಷ್ಠಾನ (ರಿ.) ಶ್ರೀ ರಾಘವೇಂದ್ರ ಸ್ವಾಮಿ ಮಠ ಕುಳಾಯಿ ಹೊಸಬೆಟ್ಟು ಇದರ ಸಂಸ್ಥಾಪನಾ ರಜತ ಮಹೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದ ಸಮಾರಂಭವನ್ನು ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಶಾಸಕ ಡಾ. ಭರತ್ ಶೆಟ್ಟಿ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ರಾಘವೇಂದ್ರ ಶಾಸ್ತ್ರಿ, ಜ್ಯೋತಿಷಿ ನಾಗೇಂದ್ರ ಭಾರದ್ವಾಜ್, ವರುಣ್ ಚೌಟ, ಶ್ರೀ ಮಠದ ರಾಘವೇಂದ್ರ ಎಚ್ ವಿ ಮೊದಲಾದವರು ಉಪಸ್ಥಿತರಿದ್ದರು.

ರಜತಮಹೋತ್ಸವ ಸಮಿತಿಯ ವತಿಯಿಂದ ಪರಮಪೂಜ್ಯ ಶ್ರೀಪಾದರ ಷಷ್ಟ್ಯಬ್ದ ಪ್ರಯುಕ್ತ ಶ್ರೀಗಳಿಗೆ ಗಣ್ಯರ ಸಮ್ಮುಖದಲ್ಲಿ ಬೆಳ್ಳಿಯ ಕಿರೀಟ ತೊಡಿಸಿ ತುಲಾಭಾರ ನೆರವೇರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!