ಸುಳ್ಯ: ತಾಲೂಕಿನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಹಂತಕರು ನಿನ್ನೆ ಬೆಳಿಗ್ಗೆಯಿಂದಲೇ ಪ್ರವೀಣ್ ಅವರ ಕೋಳಿ ಅಂಗಡಿ ಸುತ್ತಮುತ್ತ ಅಡ್ಡಾಡ್ಡಿದ್ದರು ಎಂದು ಹೇಳಲಾಗುತ್ತಿದೆ.
ಕೊಲೆಗಡುಕರು ನೆರೆಯ ರಾಜ್ಯ ಕೇರಳಕ್ಕೆ ಪರಾರಿಯಾಗಿರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು: ‘ಕಠಿಣ ಕ್ರಮ ಕಠಿಣ ಕ್ರಮ’ ಎಂದು ರಾಜ್ಯ ಬಿಜೆಪಿ ಸರ್ಕಾರ ಕೇವಲ ಹೇಳಿಕೆಗಳನ್ನು ಮಾತ್ರ ನೀಡುತ್ತಿದೆ. ಮೃದು ಧೋರಣೆಯಿಂದಲೇ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಅರ್ಥದಲ್ಲಿ ಬಿಜೆಪಿ ಕಾರ್ಯಕರ್ತರು ಟ್ವಿಟರ್ ನಲ್ಲಿ ಟ್ರೆಂಡಿಂಗ್ ಮಾಡುತ್ತಿದ್ದಾರೆ.
ಕೇಂದ್ರದಲ್ಲಿ ನಮ್ಮದೇ ಸರ್ಕಾರ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೂ ಕಾರ್ಯಕರ್ತರಿಗೆ ಇಂತಹ ಪರಿಸ್ಥಿತಿ ಏಕೆ ಬರುತ್ತಿದೆ ಎಂದು ಕಾರ್ಯಕರ್ತರು ಆಕ್ರೋಷ ವ್ಯಕ್ತಪಡಿಸಿದ್ದಾರೆ.