ಮಂಗಳೂರು: 02-09-2022 ರಂದು ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ ಈ ಸಮಯದಲ್ಲಿ ಹೆಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವುದರಿಂದ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಐಟಿಐ, ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ 02-09-2022 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಸೆ. 2- ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ
ಸೆ. 2- ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ
Date: