ಮಂಗಳೂರು: ಕಾಂತಾರ ವಿಶದೆಲ್ಲೆಡೆ ಅಬ್ಬರಿಸುತ್ತಿರುವ ಬೆನ್ನಲ್ಲೇ ಕರಾವಳಿ ಭಾಗದ ದೈವ ನರ್ತಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ದೈವಾರಾಧನೆಯು ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬವಾಗಿದೆ. ಹಿಂದೂ ಸಂಸ್ಕೃತಿಯ ಗಟ್ಟಿಯಾದ ಭಾಗವಾಗಿರುವ ಭೂತಾರಾಧನೆ ದೈವಾರಾಧನೆಯನ್ನು ಕಾಂತಾರ ಅತ್ಯುತ್ತಮವಾಗಿ ನಿರೂಪಿಸಿದೆ. ಕರ್ನಾಟಕ ಸಂಸ್ಕೃತಿ, ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.
ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ, 60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.