ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಡಾ. ಪಿ. ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಜಂಟಿ ಆಶ್ರಯದಲ್ಲಿ ಸರ್ ಮಿರ್ಜಾ ಇಸ್ಮಾಯಿಲ್ ಅವರ 137ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ.ಎಂ.ಪಿ. ಶ್ರೀನಾಥ, ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ನಡುವೆ ಸಂಬಂಧ ಬೆಸೆಯಲು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಹಿರಿಯ ವಿದ್ವಾಂಸ ಡಾ. ಪುಂಡಿಕಾಯ್ ಗಣಪಯ್ಯ ಭಟ್ ರವರು ಸರ್ ಮಿರ್ಜಾ ಇಸ್ಮಾಯಿಲ್ ಇವರು ದಿವಾನರಾಗಿ ನಾಡಿಗೆ ಹಾಗೂ ಕನ್ನಡ ನುಡಿಗೆ ನೀಡಿರುವ ಕೊಡುಗೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಇವರು ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಕಾಲೇಜುಗಳಲ್ಲಿ ಆಯೋಜಿಸಿ, ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿಯನ್ನು ಹೆಚ್ಚಿಸಲು ಸಹಾಯವಾಗುತ್ತದೆ ಎಂದು ಹೇಳಿದರು.
ಡಾ. ರವಿಕುಮಾರ ಎಂ.ಪಿ., ಡಾ. ನಾಗವೇಣಿ ಮಂಚಿ, ಡಾ. ಜ್ಯೋತಿಪ್ರಿಯಾ, ರಾಜೇಶ್ವರಿ ಎಂ., ಡಾ. ಮಾಧವ ಮೂಡುಕೊಣಾಜೆ, ಡಾ. ಚಿನ್ನಸ್ವಾಮಿ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಡಾ. ವಿನೋದ ಸ್ವಾಗತಿಸಿ, ಸಂತೋಷ್ ಬಿ.ಎಂ ವಂದಿಸಿದರು. ರಮ್ಯ ಆರ್. ಮತ್ತು ತಂಡದವರು ಪ್ರಾರ್ಥನೆಯನ್ನು ಹಾಡಿದರು.