Friday, September 20, 2024
Friday, September 20, 2024

ಬೃಹತ್ ಗಾಂಜಾ ಮಾರಾಟ ಜಾಲ ಪತ್ತೆ- ಇಬ್ಬರು ವಶಕ್ಕೆ

ಬೃಹತ್ ಗಾಂಜಾ ಮಾರಾಟ ಜಾಲ ಪತ್ತೆ- ಇಬ್ಬರು ವಶಕ್ಕೆ

Date:

ಮಂಗಳೂರು: ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ ಎಕ್ಸ್.ಯು.ವಿ 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ರಮೀಝ್ ರಾಝ್, ಅಬ್ದುಲ್ ಖಾದರ್ ಹ್ಯಾರಿಸ್ ಎಂಬವರುಗಳನ್ನು ಮುಡಿಪು ಕುರ್ನಾಡು ಗ್ರಾಮದ ಕಾಯರ್ ಗೋಳಿ ಎಂಬಲ್ಲಿ ಪತ್ತೆ ಹಚ್ಚಿ ಆರೋಪಿಗಳ ವಶದಲ್ಲಿದ್ದ ಬಿಳಿ ಬಣ್ಣದ ಮಹೇಂದ್ರ ಎಕ್ಸ್.ಯು.ವಿ 500 ಕಾರನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 132 ಕೆಜಿ ಗಾಂಜಾ, 2 ಮೊಬೈಲ್ ಫೋನ್, 3 ತಲವಾರು, ನಗದು ರೂ. 2180/- ಸ್ವಾಧೀನಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಗಾಂಜಾ, ಕಾರು, ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 39,15,000/- ಆಗಿರುತ್ತದೆ. ಆರೋಪಿಗಳು ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ, ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಇರಿಸಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ, ಹೀಗೆ ಒಟ್ಟು 3 ಪ್ರಕರಣ ದಾಖಲಾಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.

ಇನ್ನೋರ್ವ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ಎಂಬಾತನ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ.

ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ., ಎಎಸ್ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ., ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...
error: Content is protected !!