Sunday, September 6, 2026
Sunday, September 6, 2026

ಕಾಪು ಪುರಸಭೆ ಚುನಾವಣೆ: ವೇಳಾಪಟ್ಟಿ ಪ್ರಕಟ

ಕಾಪು ಪುರಸಭೆ ಚುನಾವಣೆ: ವೇಳಾಪಟ್ಟಿ ಪ್ರಕಟ

Date:

ಉಡುಪಿ: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ -2021 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ ಕಾಪು ತಾಲೂಕಿನ ಕಾಪು ಪುರಸಭೆಯ 23 ವಾರ್ಡುಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ನಿಗಧಿಪಡಿಸಿ, ಅಧಿಸೂಚನೆ ಹೊರಡಿಸಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಡಿಸೆಂಬರ್ 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿಸೆಂಬರ್ 18 ಕೊನೆಯ ದಿನವಾಗಿದ್ದು, ಡಿಸೆಂಬರ್ 27 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಡಿಸೆಂಬರ್ 30 ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!