ಕುಕ್ಕೆಹಳ್ಳಿ: ಕ್ಷಯ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆಹಳ್ಳಿ, ಗ್ರಾಮ ಪಂಚಾಯತ್ ಕುಕ್ಕೆಹಳ್ಳಿ ಜಂಟಿ ಆಶ್ರಯದಲ್ಲಿ ಕ್ಷಯ ಮುಕ್ತ ಗ್ರಾಮಕ್ಕಾಗಿ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮ ಕುಕ್ಕೆಹಳ್ಳಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ನಡೆಯಿತು. ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುರಂದರ ಕೋಟ್ಯಾನ್ ಉದ್ಘಾಟನೆ ನೆರವೇರಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರದ ವೈದ್ಯಾಧಿಕಾರಿಗಳಾದ ಡಾ. ಅರ್ಚನಾ ಹೆಗ್ಡೆ ಪ್ರಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಮಾತನಾಡಿ, ಕ್ಷಯ ರೋಗ ನಿರ್ಮೂಲನೆಯಲ್ಲಿ ಯಾವ ರೀತಿಯಾಗಿ ಸಾಗಿದರೆ ಒಳಿತು ಎನ್ನುವುದನ್ನು ತಿಳಿಸಿದರು.
ಪಿ.ಡಿ.ಓ ರಾಜೇಶ್ವರಿ ಅವರು ಕ್ಷಯ ರೋಗ ಯಾವ ರೀತಿ ಸಮಾಜದಲ್ಲಿ ಪರಿಣಾಮ ಬೀರಿದೆ ಎಂದು ಮಾಹಿತಿ ನೀಡಿದರು. ಕ್ಷಯರೋಗ ನಿರ್ಮೂಲನೆಯಲ್ಲಿ ಸಮಾಜದ ಸಹಭಾಗಿತ್ವ ಅಗತ್ಯ ಮತ್ತು ಪಂಚಾಯತ್ ವತಿಯಿಂದ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮಕ್ಕೆ ಸಹಕಾರ ನೀಡುದಾಗಿ ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಚಿದಾನಂದ ಸಂಜು ಎಸ್.ವಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ಶಿವಕುಮಾರ್ ವಂದಿಸಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.