Home ಸುದ್ಧಿಗಳು ಪ್ರಾದೇಶಿಕ ಕುಂದಾಪುರ: ಅನಧಿಕೃತ ಕ್ಲಿನಿಕ್‌ಗೆ ಬೀಗ

ಕುಂದಾಪುರ: ಅನಧಿಕೃತ ಕ್ಲಿನಿಕ್‌ಗೆ ಬೀಗ

1405
0

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಬಂಟ್ವಾಡಿಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ಮೂಕಾಂಬಿಕಾ ಖಾಸಗಿ ಕ್ಲಿನಿಕ್‌ನ್ನು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ ಪ್ರಾಧಿಕಾರ ಉಡುಪಿ ಇದರ ಅಡಿಯಲ್ಲಿ ಕುಂದಾಪುರ ತಾಲೂಕಿನ ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ ತನಿಖೆ ಮಾಡಿ ಇತ್ತಿಚೆಗೆ ಮುಚ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಕೆ.ಪಿ.ಎಮ್.ಇ ನೋಡಲ್ ಅಧಿಕಾರಿ ಡಾ. ರಾಮ್ ರಾವ್ ಕೆ., ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಪ್ರತಾಪ್, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಆಯುಷ್ ವೈದ್ಯಾಧಿಕಾರಿ ಡಾ. ಅಶೋಕ್, ಕೆಪಿಎಮ್‌ಇ ವಿಷಯ ನಿರ್ವಾಹಕರಾದ ಸುಬ್ರಮಣ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.